8:47 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ನಂದಿನಿ ಗ್ರಾಹಕರಿಗೆ ಉಚಿತ ಹೆಚ್ಚುವರಿ ಹಾಲು: ಇಂದಿನಿಂದ ತಿಂಗಳಾಂತ್ಯ ವರೆಗೆ ಸಿಗಲಿದೆ ಸೌಲಭ್ಯ 

01/06/2021, 06:59

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಇದೀಗ ಹಾಲು ಉತ್ಪಾದನೆ ಅಧಿಕವಾಗಿರುವುದರಿಂದ ವಿಶ್ವ ಹಾಲು ದಿನಾಚರಣೆಯ ಅಂಗವಾಗಿ ನಂದಿನಿಯು ಜೂ.1ರಿಂದ 30ರವರೆಗೆ ತನ್ನ ಗ್ರಾಹಕರಿಗೆ ಹೆಚ್ಚುವರಿ ಹಾಲು ಉಚಿತವಾಗಿ ನೀಡಲಿದೆ.

ಎಲ್ಲ ಮಾದರಿಯ ನಂದಿನಿ 500 ಮಿ.ಲೀ. ಮೇಲೆ ತಲಾ 20 ಮಿ.ಲೀ. ಹಾಗೂ 1 ಲೀಟರ್ ಹಾಲಿನ ಪೊಟ್ಟಣಗಳ ಮೇಲೆ ತಲಾ 

40ಮಿ.ಲೀ. ಹಾಲನ್ನು ಗ್ರಾಹಕರಿಗೆ ಉಚಿತವಾಗಿ ನೀಡಲಿದೆ.  ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ ಹೆಗ್ಡೆ ಈ ವಿಷಯವನ್ನು

ತಿಳಿಸಿದ್ದಾರೆ.

ಲಾಕ್‌ಡೌನ್ ಪರಿಣಾಮ ಶುಭ ಸಮಾರಂಭ, ದೇವಸ್ಥಾನ, ವಿದ್ಯಾಸಂಸ್ಥೆಗಳ ಹಾಸ್ಟೆಲ್, ಹೊಟೇಲ್‌ಗಳಿಗೆ ಬಂದ್ ಆಗಿರುವುದರಿಂದ  ಹಾಲು ಮತ್ತು ಮೊಸರುಗಳ ಮಾರಾಟದಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ರಾಜ್ಯಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಯು ತೀವ್ರವಾಗಿದ್ದು, ಇದರಿಂದ ಕಳೆದ ಎ.28ರಿಂದ ರಾಜ್ಯಾದ್ಯಂತ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಹಾಲಿನ ಮಾರಾಟದಲ್ಲಿ ಹೆಚ್ಚಳ ಸಾಧ್ಯವಾಗುತ್ತಿಲ್ಲ ಎಂದವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು