11:56 PM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಂಜನಗೂಡು: ಭಕ್ತ ಸಾಗರದಲ್ಲಿ ಮಿಂದೆದ್ದ ಶ್ರೀ ನಂಜುಂಡನ ತೆಪ್ಪೋತ್ಸವ

25/03/2024, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಶುಕ್ರವಾರ ನಡೆದ ಐತಿಹಾಸಿಕ ಗೌತಮ ಪಂಚಮಹಾ ರಥೋತ್ಸವದ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಭಾನುವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ವಜ್ರಾಭರಣ ಹಾಗೂ ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ದೇವಾಲಯದಿಂದ ತಂದು ಕಪಿಲಾ ನದಿಯ ಸ್ಥಾನಘಟ್ಟದ ಬಳಿ ಇರುವ ಮಂಟಪದಲ್ಲಿರಿಸಿ ಪೂಜೆ ಸಲ್ಲಿಸಲಾಯಿತು. ಬಳಿಕ ಅಲ್ಲಿಂದ ಮಂಗಳ ವಾದ್ಯಗಳೊಂದಿಗೆ ಬಣ್ಣ ಬಣ್ಣದ ಹೂವು ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ತೇಲುವ ದೇವಾಲಯದ ಮಾದರಿಯಲ್ಲಿರುವ ಯಾಂತ್ರಿಕ ದೋಣಿಯಲ್ಲಿ ಕೂರಿಸಿ ಅದ್ದೂರಿ ತೆಪ್ಪೋತ್ಸವ ನಡೆಸಲಾಯಿತು.
ಸಾವಿರಾರು ಭಕ್ತರ ಹರ್ಷೋದ್ಗಾರದೊಂದಿಗೆ ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವು ಕಪಿಲಾ ನದಿಯಲ್ಲಿ ಪೂರ್ವ ಪಶ್ಚಿಮಾಭಿಮುಖವಾಗಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ಈ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳುವ ಮೂಲಕ ಭಕ್ತರು ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ನದಿಯ ಮತ್ತೊಂದು ದಡದಲ್ಲೂ ಕೂಡ ಹೆಜ್ಜಿಗೆ ಹಾಗೂ ಸುತ್ತಮುತ್ತಲ ಗ್ರಾಮದ ಸಾವಿರಾರು ಭಕ್ತರು ಪಾಲ್ಗೊಂಡು ವಿವಿಧ ಬಗೆಯ ಬಾಣ ಬಿರುಸು ಪಟಾಕಿಗಳನ್ನು ಹೊಡೆಯುವ ಮೂಲಕ ಸಂಭ್ರಮಿಸಿದರು. ನಂತರ ತೆಪ್ಪೋತ್ಸವದಿಂದ ಹೊರ ತಂದ ಉತ್ಸವ ಮೂರ್ತಿಗಳನ್ನು ಪಟ್ಟಣದ ರಥ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು ಮೆರವಣಿಗೆ ಉದ್ದಕ್ಕೂ ಭಕ್ತರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಕಪಿಲಾ ನದಿಯು ಸೇರಿದಂತೆ ದೇವಾಲಯದ ಸುತ್ತಮುತ್ತ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶ್ರೀ ನಂಜುಂಡೇಶ್ವರನ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನಂಜನಗೂಡು ಸೇರಿದಂತೆ ವಿವಿಧೆಡೆಯಿಂದ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಅಲ್ಲಲ್ಲಿ ವಿವಿಧ ಸಂಘ-ಸಂಸ್ಥೆಗಳು ಬಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿದ್ದರು.
ದೇವಾಲಯದ ಪ್ರಧಾನ ಅರ್ಚಕರಾದ ನಾಗಚಂದ್ರ ದೀಕ್ಷಿತ್ ಮಾತನಾಡಿ ತೆಪ್ಪೋತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು