9:38 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಫೆ.6ರಿಂದ 11ರ ವರೆಗೆ ಸುತ್ತೂರು ಜಾತ್ರಾ ಮಹೋತ್ಸವ; 7ರಂದು ಸಾಮೂಹಿಕ ವಿವಾಹ

03/02/2024, 22:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಶ್ರೀ ಕ್ಷೇತ್ರ ಆದಿ ಜಗದ್ಗುರು ಸುತ್ತೂರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವವು ಫೆ.6 ರಿಂದ 11ರವರೆಗೆ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಡೆಯಲಿದ್ದು,ಜಾತ್ರಾ ಮಹೋತ್ಸವಕ್ಕೆ ಎಲ್ಲ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ ಎಂದು ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.
ನಂಜನಗೂಡು ತಾಲ್ಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.6 ರಂದು ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಅಂದು ಶ್ರೀ ವೀರಭದ್ರೇಶ್ವರ ಕೊಂಡೋತ್ಸವ, 7ರಂದು ಸಾಮೂಹಿಕ ವಿವಾಹ, ಹಾಲರವಿ ಉತ್ಸವ, 8ರಂದು ರಥೋತ್ಸವ, 9ರಂದು ಶ್ರೀ ಮಹದೇಶ್ವರ ಕೊಂಡೋತ್ಸವ, ಮತ್ತು ಲಕ್ಷ ದೀಪೋತ್ಸವ, 10 ರಂದು ಪಾರ್ವತಮ್ಮ ಮತ್ತು ಡಾ. ಶ್ರೀ ಶಾಮನೂರು ಶಿವಶಂಕರಪ್ಪ ಅತಿಥಿಗೃಹದ ಉದ್ಘಾಟನೆ ಹಾಗೂ ತೆಪ್ಪೋತ್ಸವ 11ರಂದು ಅನ್ನ ಬ್ರಹ್ಮೋತ್ಸವ, ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗಲಿವೆ ಎಂದರು.
ಸುತ್ತೂರು ಜಾತ್ರೆ ಮಹೋತ್ಸವದಲ್ಲಿ ರಂಗೋಲಿ ಮತ್ತು ಸೋಬಾನೆ ಪದ ಸ್ಪರ್ಧೆಗಳು, ಭಜನಾ ಮೇಳ, ವಸ್ತು ಪ್ರದರ್ಶನ, ಸಾಮೂಹಿಕ ವಿವಾಹ, ಕೃಷಿ ಮೇಳ, ಬ್ರಹ್ಮಾಂಡ ಕೃಷಿ, ಕೃಷಿ ವಿಚಾರ ಸಂಕಿರಣ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆಗಳು, ಚಿತ್ರಸಂತೆ, ಕುಸ್ತಿ ಪಂದ್ಯಾವಳಿ, ಆರೋಗ್ಯ ತಪಾಸಣಾ ಶಿಬಿರ, ಕ್ಯಾನ್ಸರ್ ತಪಾಸಣಾ ಶಿಬಿರ, ದೋಣಿ ವಿಹಾರ, ಗ್ರಾಮೀಣ ಜನತೆಗಾಗಿ ದೇಸಿ ಆಟಗಳು, 53ನೇ ದನಗಳ ಜಾತ್ರೆ, ಕಪಿಲಾರತಿ, ಸಾಂಸ್ಕೃತಿಕ ಮೇಳ, ಕಲಾತಂಡಗಳಿಂದ ಸಾಂಸ್ಕೃತಿಕ ಪ್ರದರ್ಶನ, ಛಾಯಾಚಿತ್ರ ಸ್ಪರ್ಧೆ, ಸೇರಿದಂತೆ ಹತ್ತು ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಜಾತ್ರೆಗೆ ಬರುವ ಎಲ್ಲರಿಗೂ ಸುಗಮ ಸಾರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಒಂದು ವಾರಗಳ ಕಾಲ ಬರುವ ಜನತೆಗೆ ತ್ರಿಕಾಲ ಅನ್ನ ದಾಸೋಹದ ವ್ಯವಸ್ಥೆಯನ್ನು ಮಾಡ ಲಾಗುತ್ತಿದೆ.
ಈ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ಮಠಾಧೀಶರು, ಧರ್ಮ ಗುರುಗಳು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರು, ಸಂಸದರು, ಶಾಸಕರು, ಸಾಹಿತಿಗಳು ಹಾಗೂ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಜಾತ್ರಾ ಮಹೋತ್ಸವದ ಬಗ್ಗೆ ವಿವನೀಡಿದರು..

ಅನ್ನ ದಾಸೋಹ ಹಾಗೂ ಉಗ್ರಾಣದಲ್ಲಿ ಶೇಖರಿಸಿ ಇಟ್ಟಿರುವ ಪಡಿತರ ಕುರಿತು ದಾಸೋಹ ಸಮಿತಿ ಅಧ್ಯಕ್ಷರಾದ ಪ್ರೊ. ಸುಬ್ಬಪ್ಪ ವಿವರಣೆ ನೀಡಿದರು.
ಇದೇ ಸಂದರ್ಭ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಲಾಗಿರುವ ಜೋಡಿ ಎತ್ತಿನ ಗಾಡಿ, ನಂದಿ ವಿಗ್ರಹ, ಬೆಳೆದಿರುವ ನೂರಾರು ಬಗೆಯ ತರಕಾರಿಗಳು, ಹೂವು ಹಣ್ಣುಗಳು ಆಹಾರ ಬೆಳೆಗಳು ಅಲ್ಲದೆ ಒಂದು ಎಕರೆ ಪ್ರದೇಶದಲ್ಲಿ ವಿವಿಧ ಬಗೆಯ ಬ್ರಹ್ಮಾಂಡ ಕೃಷಿ ಪದ್ಧತಿಯು ನೋಡುಗರ ಮನ ಸೂರೆಗೊಳ್ಳುವಂತಿದ್ದವು
ಮಾಧ್ಯಮಗೋಷ್ಠಿಯಲ್ಲಿ ಕಾರ್ಯದರ್ಶಿ ಶಿವಕುಮಾರ್, ಆಡಳಿತಾಧಿಕಾರಿ ಉದಯಶಂಕರ್, ಜಾತ್ರಾ ಸಮಿತಿಯ ಸುಬ್ಬಣ್ಣ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು