2:52 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ನಂಜನಗೂಡು: ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ

29/12/2024, 17:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ರೈತರು ಪ್ರತಿಭಟನೆ ನಡೆಸಲಾಯಿತು.


ನಂಜನಗೂಡು ನಗರದ ಕೆಎಸ್ಸಾರ್ಟಿಸಿ ಘಟಕದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ಸುಗಳು ಬರುತ್ತಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ, ವಿದ್ಯಾರ್ಥಿಗಳು ಐದು ಕಿಲೋಮೀಟರ್ ದೂರದ ತನಕ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಮಾಡಲು ನಂಜನಗೂಡಿನಿಂದ ಮುದ್ದಹಳ್ಳಿ, ನವಿಲೂರು, ಮಾರ್ಗವಾಗಿ ಕಸುವಿನ ಹಳ್ಳಿಗೆ ಹೋಗುವಂತಹ ಸಾರಿಗೆ ಬಸ್ ಗಳನ್ನು ಸೂರಹಳ್ಳಿ ಗ್ರಾಮಕ್ಕೂ ಬಿಡಬೇಕು ಎಂದು ಹಲವಾರು ಬಾರಿ ಜನಪ್ರತಿನಿಧಿಗಳು ಹಾಗೂ ಡಿಪೋ ಮ್ಯಾನೇಜರ್ ಅವರಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಈ ಕೂಡಲೇ ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ರೈತರು ಪಟ್ಟು ಹಿಡಿದರು.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಕಾರ್ಯದರ್ಶಿ ಉಪ್ಪಿನ ಹಳ್ಳಿ ದೇವರಾಜ್, ಮಹಿಳಾ ಘಟಕದ ಅಧ್ಯಕ್ಷೆ ಶ್ವೇತಾ, ಸೂರಹಳ್ಳಿ ಗ್ರಾಮ ಘಟಕದ ಗೌರವಾಧ್ಯಕ್ಷ ಮಲ್ಲೇಶ್ ಶೆಟ್ಟಿ, ಅಧ್ಯಕ್ಷ ಮಹದೇವಸ್ವಾಮಿ, ಉಪಾಧ್ಯಕ್ಷ ಕೃಷ್ಣ, ಖಜಾಂಚಿ ಮರಿಸ್ವಾಮಿ, ಕಾರ್ಯದರ್ಶಿ ಸಿದ್ದರಾಜು, ಸಂಘಟನಾ ಕಾರ್ಯದರ್ಶಿ ಸಿದ್ದರಾಜ ನಾಯಕ, ಮೋಹನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು