5:19 AM Saturday5 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ನಂಜನಗೂಡು: 23 ಡೆಂಗ್ಯೂ, 9 ಚಿಕನ್ ಗುನ್ಯಾ ಪ್ರಕರಣ ಪತ್ತೆ: ಎಚ್ಚೆತ್ತ ತಾಲೂಕು ಆಡಳಿತ; ಶಾಸಕ ದರ್ಶನ್ ಧೃವನಾರಾಯಣ್ ನೇತೃತ್ವದಲ್ಲಿ ಸಭೆ

07/07/2024, 17:59

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕಿನಲ್ಲಿ ಡೆಂಗ್ಯೂ ಅಬ್ಬರ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ಈಗಾಗಲೇ 23 ಡೆಂಗ್ಯೂ ಹಾಗೂ 9 ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದೆ. ಎಚ್ಚೆತ್ತ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪಟ್ಟಣದ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ , ಇ ಓ ಜೆರಾಲ್ಡ್ ರಾಜೇಶ್ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಈಶ್ವರ್ ನೇತೃತ್ವದಲ್ಲಿ ಸಭೆ ನಡೆದಿದೆ.


ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡಬೇಕು, ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು, ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ನಿಗವಹಿಸಬೇಕು.
ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ಕಾರಣ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನ ಹೆಚ್ಚಿಸಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಗ್ರಾಮ ಪಂಚಾಯಿತಿಯಲ್ಲಿ ಮತ್ತು ನಗರಸಭೆ ಯಾವ ವಾರ್ಡ್ ಗಳಲ್ಲಿ ಅತಿ ಹೆಚ್ಚು ಪ್ರಕರಣ ಕಂಡುಬರುತ್ತದೆ. ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತೀರಿ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಶಾಸಕ ದರ್ಶನ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು
ಬಿಡುಗಡೆಗೊಳಿಸಿದರು.
ಸಭೆಯಲ್ಲಿ ನಗರಸಭೆಯ ಆಯುಕ್ತ ನಂಜುಂಡಸ್ವಾಮಿ ಸಿ ಡಿಪಿಓ ಭವ್ಯಶ್ರೀ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು