6:38 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ನಂಜನಗೂಡು: ಗಾರ್ಮೆಂಟ್ ಫ್ಯಾಕ್ಟರಿ ಲೋಕಾರ್ಪಣೆ; ಉಸ್ತುವಾರಿ ಸಚಿವ ಮಹದೇವಪ್ಪ ಚಾಲನೆ

01/12/2023, 23:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದ್ಯಮಿ ಇಂದನ್ ಬಾಬು ಒಡೆತನಕ್ಕೆ ಸೇರಿದ ಚಾಮುಂಡೇಶ್ವರಿ ಎಂಟರ್ಪ್ರೈಸಸ್ ಎಂಬ ಬೃಹತ್ ಕಾರ್ಖಾನೆಯನ್ನು ಉದ್ಘಾಟನೆ ಮಾಡಿ ಸಚಿವ ಮಹದೇವಪ್ಪ ಲೋಕಾರ್ಪಣೆಗೊಳಿಸಿದರು.
ಪಶು ಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಇದಕ್ಕೆ ಸಾಥ್ ನೀಡಿದರು.


ಕಡಕೋಳ ಕೈಗಾರಿಕಾ ಪ್ರದೇಶದ ಎರಡನೇ ಹಂತದಲ್ಲಿರುವ ಸುಮಾರು ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಬೃಹತ್ ಕಾರ್ಖಾನೆ ಕಟ್ಟಡಗಳು ಇದಾಗಿದೆ. ನೂತನ ಕಟ್ಟಡಗಳ ಉದ್ಘಾಟನೆ ಹಾಗೂ ಪೂಜಾ ಕಾರ್ಯದಲ್ಲಿ ಭಾಗಿಯಾದ ಸಚಿವದ್ವಯರು ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.
ನಂತರ ಸಚಿವರುಗಳಾದ ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಮಾತನಾಡಿ, ಕೆಐ ಎಡಿಬಿ ವತಿಯಿಂದ ಸರ್ಕಾರ ನೀಡಿರುವ ಸಬ್ಸಿಡಿಯಿಂದ 2 ಎಕರೆ ಜಮೀನು ಪಡೆದು ಕೆ ಎಸ್ ಎಫ್ ಸಿ ಹಣಕಾಸು ಸಂಸ್ಥೆ ವತಿಯಿಂದ ಯೋಜನೆಗೆ ಅನುಗುಣವಾಗಿ ಸಾಲ ಪಡೆದು ಇಲ್ಲಿ ಇಂದನ್ ಬಾಬು ಉದ್ಯಮ ಸ್ಥಾಪನೆ ಮಾಡಿದ್ದಾರೆ. ಅವರಿಗೆ ಶುಭವಾಗಲಿ ಎಂದರು ಯುವಕರು ಹಾಗು ಉದ್ಯಮಿ ಗಳು ಸರ್ಕಾರದ ಇಂತಹ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ನುಡಿದರು.
ಇದೇ ಸಂದರ್ಭ ಕಾರ್ಯ ಕ್ರಮಕ್ಕೆ ಬಂದ ಸಚಿವರು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಾಜಿ ಶಾಸಕರುಗಳಾದ ಡಾ. ಯತೀಂದ್ರ ಸಿದ್ದರಾಮಯ್ಯ, ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಎಂ ರಾಮು, ಉದ್ಯಮಿ ಕೃಷ್ಣಪ್ಪ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು