6:01 AM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ನಂಜನಗೂಡಿನ ಪರಶುರಾಮ ದೇವಾಲಯದಲ್ಲಿ ಮೊದಲ ಶ್ರಾವಣ ಪೂಜೆ: ಚೂರ್ಣಾವತಿ ನದಿಯ ದಡದಲ್ಲಿ ಹಲವು ಸೇವೆ

10/08/2024, 20:27

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಶ್ರೀ ಪರಶುರಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರಾವಣ ಮಾಸದ ಅಂಗವಾಗಿ ಶ್ರೀ ಪರಶುರಾಮರ ಮೂರ್ತಿಯನ್ನು ವಿಶೇಷವಾಗಿ ಬಣ್ಣ,ಬಣ್ಣದ ಹೂಗಳಿಂದ ಅಲಂಕರಿಸಿ ಪೂಜಾ ಕಾರ್ಯಗಳನ್ನು ನಡೆಸಲಾಯಿತು.
ಚೂರ್ಣಾವತಿ ನದಿಯ ದಡದಲ್ಲಿರುವ ಶ್ರೀ ಪರಶುರಾಮರ ದೇವಾಲಯಕ್ಕೆ ವಿವಿಧೆಡೆಯಿಂದ ಭಕ್ತರು ಆಗಮಿಸಿ ಹಲವು ಸೇವೆಗಳನ್ನು ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ತಮ್ಮ ಕಷ್ಟ ಕಾರ್ಪಣ್ಯಗಳನ್ನು ಪರಿಹರಿಸುವಂತೆ ಶ್ರೀ ಪರಶುರಾಮನಲ್ಲಿ ಬೇಡಿಕೊಂಡು ಹರಕೆ ಹೊತ್ತ ಭಕ್ತರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ ಬೆಲ್ಲ ಮತ್ತು ಉಪ್ಪನ್ನು ಚೂರ್ಣಾವತಿ ನದಿಗೆ ಅರ್ಪಿಸುವ ಮೂಲಕ ತಮ್ಮ ಹರಕೆ ತೀರಿಸುತ್ತಾರೆ.


ಮೊದಲನೇ ಶನಿವಾರದ ಕಾರಣ ಭಕ್ತರು ಅಷ್ಟೇನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರಲಿಲ್ಲ. ಆದರೂ ಹಣ್ಣು ಕಾಯಿ ಸೇರಿದಂತೆ ಪೂಜಾ ಸಾಮಗ್ರಿಗಳು ಹಾಗೂ ಬೆಲ್ಲ ಮತ್ತು ಉಪ್ಪಿನ ಮಾರಾಟ ಜೋರಾಗಿಯೇ ನಡೆಯಿತು.
ಕೆಲವು ದಾನಿಗಳು ಬಂದ ಎಲ್ಲಾ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಅರ್ಚಕರಾದ ಕೃಷ್ಣ ಅಯ್ಯಂಗಾರ್ ಮಾತನಾಡಿ, ಶ್ರಾವಣ ಮಾಸದ ವಿಶೇಷದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು