12:08 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು

07/01/2024, 21:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmil.com

ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಊಟಕ್ಕೆಂದು ತನ್ನ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಡಸ್ಟ್ ತುಂಬಿದ ಹತ್ತು ಚಕ್ರದ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಮತ್ತು ಹಲ್ಲರೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಲ್ಲರೆ ಗ್ರಾಮದ ಅಬ್ದುಲ್ ಸಲಾಂ (55) ಮೃತ ರೈತ. ಇವರು ಕಸುವಿನಹಳ್ಳಿ ಸಮೀಪದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು ಮಧ್ಯಾಹ್ನದ ಊಟದ ವೇಳೆಯಲ್ಲಿ ಊಟ ಮಾಡುವ ಸಲುವಾಗಿ ಗ್ರಾಮದತ್ತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಡಸ್ಟ್ ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯ ಚಕ್ರಕ್ಕೆ ಸಿಲುಕಿದ ರೈತನ ಮೇಲೆ ಹರಿದು ಸ್ಥಳದಲ್ಲಿ ಸಾವನಪ್ಪಿರುವ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮೃತ ರೈತನ ಕುಟುಂಬಸ್ಥರು ಮತ್ತು ಹಲ್ಲರೆ ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಗ್ರಾಮದ ಮುಂಭಾಗದಲ್ಲಿ ಬಾರಿ ಗಾತ್ರದ ಟಿಪ್ಪರ್ ಮತ್ತು ಲಾರಿಗಳು ಡಸ್ಟು ಮತ್ತು ಬಾರಿ ಪ್ರಮಾಣದ ಕೋರೆ ಕಲ್ಲು ಮತ್ತು ಜಲ್ಲಿಯನ್ನು ತುಂಬಿಕೊಂಡು ತುಂಬಾ ವೇಗವಾಗಿ ಸಂಚರಿಸುತ್ತಿವೆ.
ಸಾಕಷ್ಟು ಬಾರಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ವಿಚಾರವಾಗಿ ಮೌಖಿಕವಾಗಿ ತಿಳಿಸಲಾಗಿದೆ ಆದರೂ ಕೂಡ ಪೊಲೀಸರು ಉಡಾಫೆ ವರ್ತನೆ ತೋರಿ ಚಾಲನೆ ಮಾಡುವ ಟಿಪ್ಪರ್ ಲಾರಿ ಚಾಲಕರಿಗೆ ಯಾವುದೇ ರೀತಿಯ ನಿತಿ ಪಾಠ ಹೇಳಲು ಮುಂದಾಗಿಲ್ಲ. ಇದರಿಂದ ಇಂತಹ ಅವಘಡಗಳು ಸಂಭವಿಸಿ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಎದುರಾಗಿದೆ. ಕೂಡಲೇ ಬಾರಿ ಪ್ರಮಾಣದ ಟಿಪ್ಪರ್ ಮತ್ತು ಲಾರಿ ಚಾಲಕರಿಗೆ ತಿಳಿಹೇಳಿ ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದ ರೀತಿಯಲ್ಲಿ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಘಟನೆಯ ವಿಚಾರವಾಗಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಘಟನೆಗೆ ಕಾರಣವಾದ ಟಿಪ್ಪರ್ ಮತ್ತು ದ್ವಿಚಕ್ರ ವಾಹನವನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ಮೃತ ರೈತನ ಶವವನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು