ಇತ್ತೀಚಿನ ಸುದ್ದಿ
ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ
16/02/2025, 19:37

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು.
ಕ್ಷೇತ್ರದ ವ್ಯಾಪ್ತಿಗೆ ಬರುವ ಹರದನಹಳ್ಳಿ, ಹುಲ್ಲಹಳ್ಳಿ ಮುಳ್ಳೂರು, ಚಿಕ್ಕ ಕವಲಂದೆ, ಮಲ್ಲಹಳ್ಳಿ ,ನಂಜನಹಳ್ಳಿ ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ಸಿಸಿ ರಸ್ತೆ, ಚರಂಡಿ ,ಅಂಬೇಡ್ಕರ್ ಸಮುದಾಯ ಭವನಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಶಾಲು ಹೊದಿಸಿ ಮಾಲಾಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ ನಮ್ಮ ಸರ್ಕಾರ ಬಂದ 20 ತಿಂಗಳಲ್ಲಿ ನಿಮ್ಮ ಗ್ರಾಮಗಳಿಗೆ ಈಗಾಗಲೇ ಸಾಕಷ್ಟು ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡಲಾಗುವುದು. ಇದಕ್ಕೆ ತಮ್ಮೆಲ್ಲರ ಸಹಕಾರ ಹಾಗೂ ಸಮಯ ನೀಡಬೇಕು ಎಂದರು .
ಸಿಎಂ ಸಿದ್ದರಾಮಯ್ಯ ನವರ ಸರ್ಕಾರದಲ್ಲಿ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದೇ ಕಾರ್ಯಕ್ರಮಕ್ಕೆ ಬಂದ ಶಾಸಕರಿಗೆ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಬೇಕಾದ ಸೌಲಭ್ಯ ಹಾಗೂ ವೈಯಕ್ತಿಕವಾಗಿ ಆಗಬೇಕಾದ ಕೆಲಸ ಕಾರ್ಯಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷ ಲೋಕೇಶ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಪಿ ಎ ಸಿ ಸಿ ಬ್ಯಾಂಕ್ ಅಧ್ಯಕ್ಷ ನಾಗೇಶ್ ,ಮುಖಂಡರುಗಳಾದ ಸೋಮೇಶ್,ಶಿವನಂಜ ನಾಯಕ , ಅಭಿನಂದನ್ ,ಮಾದಪ್ಪ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.