ಇತ್ತೀಚಿನ ಸುದ್ದಿ
ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ
21/09/2024, 10:20
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಸುಮಾರು 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಭೂಮಿ ಪೂಜೆ ನೆರವೇರಿಸಿದರು
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ರಾಜ್ಯ ಹೆದ್ದಾರಿ 2012 ಹಾಗೂ 47ರಲ್ಲಿ ಹುಲ್ಲಹಳ್ಳಿ, ಕಾರ್ಯ, ಮಾದಾಪುರ ಮಾರ್ಗವಾಗಿ ದುಗ್ಗಳ್ಳಿ ಗೇಟ್ ವರೆಗೆ ಹಾಗೂ ಹುರ, ಅರಿಯೂರು, ಮುಳ್ಳೂರು ರಸ್ತೆ ಸೇರಿದಂತೆ ಆಯ್ದ ಭಾಗಗಳಲ್ಲಿ ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗಾಗಿ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಹಾಗೂ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಮತ್ತಿತರರು ಭೂಮಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಕಾಮಗಾರಿಗೆ ಚಾಲನೆ ನೀಡಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಹಲವಾರು ವರ್ಷಗಳಿಂದ ಈ ರಸ್ತೆಗಳಲ್ಲಿ ತಿರುಗಾಡಲು ಸಾಧ್ಯವಾಗದಷ್ಟು ಹದಗೆಟ್ಟಿತ್ತು ಚುನಾವಣಾ ಸಮಯದಲ್ಲಿ ಮಾತು ಕೊಟ್ಟಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿ 25 ಕೋಟಿ ಅನುದಾನ ತಂದು ಈ ಭಾಗದ ರಸ್ತೆಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ ಅಲ್ಲದೆ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಈ ಸಂದರ್ಭ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅದರಂತೆ ಸಚಿವರಾದ ಜಾರಕಿಹೊಳಿ ಅವ್ರು ಕೂಡ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದು ಸ್ಮರಿಸಿ ನಮ್ಮ ತಂದೆಯಂತೆ ನಾನು ಕೂಡ ನಿಮ್ಮಲ್ಲಿ ಒಬ್ಬನಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ನಿಲ್ಲುತ್ತೇನೆ ನಿಮ್ಮ ಸಹಕಾರ ಇರಲಿ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿರುವ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಬಂದು ಶಾಸಕರನ್ನು ಗ್ರಾಮಸ್ಥರು ಪಟಾಕಿ ಸಿಡಿಸಿ ಮಾಲಾರ್ಪಣೆ ಮಾಡಿ ಗೌರವಿಸಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷ ಲೋಕೇಶ್, ಕೆಪಿಸಿಸಿ ಸದಸ್ಯ ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ, ಮುಖಂಡರಾದ ಮಾರುತಿ, ಮಾದಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಉಪಸ್ಥಿತರಿದ್ದರು.