11:26 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ ಸಿಬ್ಬಂದಿಗಳು ಬಂಧನ

29/01/2025, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಅಬ್ಬರಕ್ಕೆ ಹುಲ್ಲಹಳ್ಳಿ ಠಾಣೆ ಪೊಲೀಸರು ಮೂಗುದಾರ ಹಾಕಲು ಮುಂದಾಗಿದ್ದಾರೆ. 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ FIR ದಾಖಲಿಸಿದ್ದ ಪೊಲೀಸರು ಇದೀಗ ಮತ್ತೊಂದು ಹೆಜ್ಜೆ ಮಹತ್ತರ ಹೆಜ್ಜೆ ಹಾಕಿ 4 ಮಂದಿ ಸಿಬ್ಬಂದಿಗಳ ಬಂಧಿಸಿದ್ದಾರೆ.
ಬಿಎಸ್ ಎಸ್ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಆಕಾಶ್(22), ಗ್ರಾಮೀಣ ಕೂಟ ಫೈನಾನ್ಸ್ ನ ಕಲೆಕ್ಷನ್ ಆಫೀಸರ್ ಸಿದ್ದರಾಜು(23), ಉಜ್ಜೀವನ್ ಫೈನಾನ್ಸ್ ನ ಕಸ್ಟಮರ್ ರಿಲೇಷನ್ ಆಫೀಸರ್ ಲೋಕೇಶ್(25) ಹಾಗೂ ಐಡಿಎಫ್ ಸಿ ಫೈನಾನ್ಸ್ ನ ಗ್ರೂಪ್ ರಿಲೇ಼ಷನ್ ಮ್ಯಾನೇಜರ್ ಸಿದ್ದರಾಜು(28) ಬಂಧಿತ ಸಿಬ್ಬಂದಿಗಳು.
ಸಾಲಗಾರರ ಜೊತೆ ಸಾಲ ವಸೂಲಿ ಮಾಡುವಾಗ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಗಳನ್ನ ಬಂಧಿಸಲಾಗಿದೆ. ಎರಡು ದಿನಗಳ ಹಿಂದೆ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದರು.
ಪತ್ನಿ ಲತಾ ಅವರು 5 ಮೈಕ್ರೋ ಫೈನಾನ್ಸ್ ಗಳ ವಿರುದ್ದ ಪ್ರಕರಣ ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಹುಲ್ಲಹಳ್ಳಿ ಪೊಲೀಸರು ನಾಲ್ಕು ಫೈನಾನ್ಸ್ ಕಂಪನಿ ಸಿಬ್ಬಂದಿಗಳನ್ನ ಅರೆಸ್ಟ್ ಮಾಡಿ ಕಂಬಿ ಎಣಿಸಲು ಕಳಿಸಿದ್ದಾರೆ.

ಧರ್ಮಸ್ಥಳ ಸ್ತ್ರೀ ಶಕ್ತಿ ಸಂಘದ ಮೇಲೂ ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ಪ್ರಕರಣ ದಾಖಲಾದಾಗ ಮುಖ್ಯಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ.
ಆದ್ರೆ ಇಲ್ಲಿ ಕೇವಲ ಸಿಬ್ಬಂದಿಗಳನ್ನ ಮಾತ್ರ ಬಂಧಿಸಿರುವುದು ಕೆಲವು ಅನುಮಾನಗಳನ್ನ ಹುಟ್ಟಿಹಾಕಿದಂತಾಗಿದೆ.
ಕೂಡಲೇ ಸರ್ಕಾರ ಹಾಗೂ ಅಧಿಕಾರಿಗಳು ಮೈಕ್ರೋ ಫೈನಾನ್ಸ್ ಕಂಪನಿಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಮೇಲೂ ಕ್ರಮ ಜರುಗಿಸುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು