ಇತ್ತೀಚಿನ ಸುದ್ದಿ
ನಂಜನಗೂಡು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಗಂಭೀರ ಗಾಯ
09/12/2023, 12:12
ನಂಜನಗೂಡು(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇಬೂರು ಬಳಿ ನಂಜನಗೂಡು ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ.
ನಂಜನಗೂಡಿನ ಸತ್ಯ ಫೈನಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸಿದ್ದಯ್ಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಕಣೆನೂರು ಗ್ರಾಮದ ಮಹೇಂದ್ರ ಎಂಬುವವರೇ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಾಳುಗಳಾಗಿರುವ ದುರ್ದೈವಿಗಳು.
ಆಟೋ ಚಾಲಕನಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಆಂಬುಲೆನ್ಸ್ ಮುಖಾಂತರ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ನಂಜನಗೂಡು ಕಡೆಯಿಂದ ಹುಲ್ಲಹಳ್ಳಿ ಕಡೆಗೆ ಬರುತ್ತಿದ್ದ ಆಟೋ ಮತ್ತು ಹುಲ್ಲಹಳ್ಳಿಯಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ತಲೆಗೆ ತೀವ್ರ ಪೆಟ್ಟು ಬಿದ್ದು ಆಟೋ ಮತ್ತು ಬೈಕ್ ಪೂರ್ಣ ಜಖಂಗೊಂಡಿವೆ.
ನಂಜನಗೂಡು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.