10:15 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಬಹಿರಂಗ ಪ್ರಚಾರ ಕೊನೆಯ ದಿನ ಬಿಜೆಪಿಯಿಂದ ಅಬ್ಬರದ ಪ್ರಚಾರ

24/04/2024, 19:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಹಿರಂಗ ಪ್ರಚಾರದ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಪಕ್ಷದ ಕಾರ್ಯಕರ್ತ ಮುಖಂಡರು ಬಿರುಸಿನ ಮತ ಪ್ರಚಾರ ನಡೆಸಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮರಗಾಲ, ಹೆಡತಲೆ ,ಬದನವಾಳು, ದೇವರಸನ ಹಳ್ಳಿ ಸೇರಿದಂತೆ ವಿವಿಧೆಡೆ ಬಿಜೆಪಿ ಮುಖಂಡರು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ನಡೆಸಿದರು.
ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಘಟಕದ ಕಾರ್ಯದರ್ಶಿ ಹೆಮ್ಮರಗಾಲ ಸೋಮಣ್ಣ ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.


ಪಾದಯಾತ್ರೆಯಲ್ಲಿ ಪಿಎಂ ನರೇಂದ್ರ ಮೋದಿ ಹಾಗೂ ಪಕ್ಷದ ಮುಖಂಡರುಗಳಿಗೆ ಜಯಕಾರದ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ನಂತರ ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಮುಖಂಡ ಸೋಮಣ್ಣ ಮಾತನಾಡಿ ಈ ಕ್ಷೇತ್ರದ ಅಭಿವೃದ್ಧಿ ಹರಿಕಾರರಾದ ಮಾಜಿ ಶಾಸಕ ಹರ್ಷವರ್ಧನ್ ಅವರು ಈ ಗ್ರಾಮಕ್ಕೆ ಸುಮಾರು 13 ಕೋಟಿ ರೂಪಾಯಿಗಳ ಅನುದಾನ ನೀಡಿ ಗ್ರಾಮದ ಅಭಿವೃದ್ಧಿ ಪಡಿಸಿದ್ದರು. ಆದರೆ ರಾಜ್ಯ ಸರ್ಕಾರದ ಸುಳ್ಳು ಗ್ಯಾರಂಟಿ ಮತ್ತು ಪೊಳ್ಳು ಭರವಸೆಗಳು ಅವರನ್ನು ಸೋಲುವಂತೆ ಮಾಡಿತು ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ತಂದಿದ್ದ ಹಲವಾರು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿ, ಜನರಿಗೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ 60 ವರ್ಷಗಳಲ್ಲಿ ಮಾಡದ ಅಭಿವೃದ್ಧಿಯನ್ನು ಮೋದಿಯವರು 10 ವರ್ಷದಲ್ಲೇ ಮಾಡಿ ದೇಶದಲ್ಲಿ ಹಲವಾರು ಬದಲಾವಣೆ ತಂದಿದ್ದಾರೆ. ಅದಕ್ಕಾಗಿ ಮತ್ತೊಮ್ಮೆ ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಲು ನಮ್ಮ ಪಕ್ಷದ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸಿ ಕೊಡುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ಪ್ರಚಾರಕ್ಕೆ ಬಂದ ಎಲ್ಲ ಮುಖಂಡರುಗಳಿಗೆ ಗ್ರಾಮಸ್ಥರು ಶಾಲುಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಈ ಸಂದರ್ಭ ಮಂಡಲ ಅಧ್ಯಕ್ಷರಾದ ಕೆಂಡಗಣ್ಣಪ್ಪ ಕಾರ್ಯದರ್ಶಿ ಪುಟ್ಟಸ್ವಾಮಿ ಮುಖಂಡರುಗಳಾದ ಬದನವಾಳು ಮಹೇಶ್, ಮಸಗೆ ರಾಜು, ಮಹಾದೇವಸ್ವಾಮಿ ಮುಳ್ಳೂರು ಶೇಖರ್, ಸುರೇಶ್, ಕಾಳಪ್ಪ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು