12:41 PM Sunday8 - February 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು

26/03/2024, 15:21

*ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ*

*ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ ನೀಗಿಸಿಕೊಳ್ಳುವ ಸಲುವಾಗಿ ಕಪಿಲಾ ನದಿಯಲ್ಲಿ ಈಜಲು ತೆರಳಿದ ಮೂವರು ಯುವಕರು ಸುಳಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ
ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಬಳಿ ನಡೆದಿದೆ.


ಬಿಹಾರ ಮೂಲದ ಮೃತ ಕಾರ್ಮಿಕರಾದ ಮಿಲನ್ (25) ವರ್ಷ ಮೋಹನ್ (19) ವರ್ಷ ಹಾಗೂ ತರುಣ್ (19) ವರ್ಷ ಎಂಬುವರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಬಿಸಿಲಿನ ಬೇಗೆ ತಾಳಲಾರದೆ ಸಮೀಪದ ಗೊದ್ದನಪುರ ಗ್ರಾಮದ ಕಪಿಲಾ ನದಿಗೆ ಈಜಲು ತೆರಳಿದ್ದಾರೆ.
ಈ ಸಂದರ್ಭ ಮೂವರು ಯುವಕರು ನದಿಯ ಸುಳಿಗೆ ಸಿಲುಕಿದ ಕಾರಣ ಸುಳಿಯಿಂದ ತಪ್ಪಿಸಿಕೊಳ್ಳಲಾಗದೆ ಮೂವರೂ ಜೀವಕಳೆದುಕೊಂಡಿದ್ದಾರೆ.
ವಿಷಯ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ಠಾಣೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಶೋಧ ಕಾರ್ಯದಲ್ಲಿ ಮಿಲನ್ ಎಂಬು ಯುವಕನ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಾಲ್ಕೈದು ವರ್ಷಗಳಿಂದಲೂ ಕೂಡ ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕರು.
ಇದೀಗ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ನೆಸ್ಲೆ ಕಾರ್ಖಾನೆಯ ಯಾವುದೇ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿರದ ಕಾರಣ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು