8:23 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು