11:23 PM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು