ಇತ್ತೀಚಿನ ಸುದ್ದಿ
ನಂಜನಗೂಡು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಕೀಲರ ಪ್ರತಿಭಟನೆ
21/12/2024, 17:36
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.
ನ್ಯಾಯಾಲಯದಿಂದ ಮೆರವಣಿಗೆ ಬಂದು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು.
ವಕೀಲರ ಸಂಘದ ಅಧ್ಯಕ್ಷ ಅನಿಯಂಬಳ್ಳಿ ಮಹದೇವಸ್ವಾಮಿ ಮಾತನಾಡಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹಾಗೂ ಹಗುರವಾಗಿ ಮಾತನಾಡಿರುವುದನ್ನು ನಮ್ಮ ತಾಲೂಕು ಸಂಘವು ತೀವ್ರವಾಗಿ ಖಂಡಿಸುತ್ತದೆ ಅಲ್ಲದೆ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈ ಬಿಟ್ಟು ದೇಶದಿಂದಲೇ ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ವಕೀಲರುಗಳಾದ ಪ್ರಸನ್ನ, ಮುರಳಿ,ಸೋಹನ್ ಕುಮಾರ್, ಶೇಖರ್, ಶ್ರೀಕಂಠು, ರವಿ, ಗಣೇಶ್ ,ಶ್ರೀನಿವಾಸ್, ಷಣ್ಮುಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.