3:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!!

28/07/2024, 13:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟನೆ ನಡೆದಿದೆ.
ಕೇಂದ್ರ ಸಚಿವರ ನಂಜನಗೂಡು ಪ್ರವಾಸದ ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಲಾಗಿತ್ತು.

ಈ ಬಗ್ಗೆ ಪ್ರವಾಸ ಪಟ್ಟಿಯನ್ನು ಸಚಿವಾಲಯದ ಅಧಿಕಾರಿಗಳು
ಬಿಡುಗಡೆ ಮಾಡಿದ್ದರು.
ಈ ನಡುವೆ ವಿಶ್ರಾಂತಿಗಾಗಿ ಕುಮಾರಸ್ವಾಮಿ ಅವರು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.
ಆದರೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು.
10 ನಿಮಿಷ ಕಾದರು ಬಾಗಿಲು ತೆಗೆಯಲು ಸಿಬ್ಬಂದಿಗಳು ಆಗಮಿಸಿಲ್ಲ. ನಂತರ ಕುಮಾರಸ್ವಾಮಿ ಅವರು
ವಾಪಸ್ಸು ತೆರಳಿದರು.
ಈ ಬಗ್ಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಅವರು ಕಾರಿನಲ್ಲೆ ಕುಳಿತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು