6:38 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ನಂಜನಗೂಡು: ಧಾರ್ಮಿಕ ಆಚರಣೆ ಸಂಬಂಧಿಸಿದ ವಿವಾದ; 2 ಗುಂಪುಗಳ ನಡುವೆ ಮಾತಿನ‌ ಚಕಮಕಿ; ಲಘು ಲಾಠಿ ಪ್ರಹಾರ

27/12/2023, 15:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ನಂಜನಗೂಡಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ, ಪರ -ವಿರೋಧ ಘೋಷಣೆಗಳ ನಡುವೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ ಘಟನೆ ನಡೆದಿದೆ.
ಸಂಪ್ರದಾಯದಂತೆ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರನ ದೇವಾಲಯದ ವತಿಯಿಂದ ಪ್ರತಿವರ್ಷದಂತೆ ಅಂದಕಾಸುರನ ವಧೆ ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು.‌ಪಟ್ಟಣದ ರಥ ಬೀದಿಯಲ್ಲಿರುವ ರಾಕ್ಷಸ ಮಂಟಪ ವೃತ್ತದಲ್ಲಿ ಅಂದಕಾಸುರನ (ಮಹಿಷಾಸುರನ) ಚಿತ್ರವಿರುವ ರಂಗೋಲಿ ಬಿಡಿಸಲಾಗುತ್ತದೆ
ನಂತರ ಶ್ರೀಕಂಠೇಶ್ವರ ಸ್ವಾಮಿ ಹಾಗೂ ಪಾರ್ವತಿ ದೇವಿಯ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ತಂದು ಮಹಿಷಾಸುರ ಆಕೃತಿಯ ರಂಗೋಲಿಯನ್ನು ತುಳಿದು ನಾಶ ಮಾಡುವುದೇ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿದ್ದ ಅಂದಕಾಸುರನ ವಧೆಯ ಕಾರ್ಯಕ್ರಮ. ಅದರಂತೆ ಪಟ್ಟಣದ ರಾಕ್ಷಸ ಮಂಟಪ ವೃತ್ತದಲ್ಲಿ ಮಹಿಷಾಸುರ ಬ್ಯಾನರ್ ಅಳವಡಿಸಿ ರಂಗೋಲಿಯ ಚಿತ್ರವನ್ನು ಬಿಡಿಸಲಾಗಿತ್ತು. ಮಹಿಷಾಸುರನ ಚಿತ್ರವಿರುವ ಅಂದಕಾಸುರನ ವಧೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದ ನೂರಾರು ದಸಂಸ ಕಾರ್ಯಕರ್ತರು ಸ್ಥಳದಲ್ಲಿ ಜಮಾಹಿಸಿ ಅಂದಕಾಸುರನ ವಧೆ ನಡೆಸದಂತೆ ತಡೆಗಟ್ಟಲು ಮುಂದಾದರು. ಅದೇ ಸಮಯಕ್ಕೆ ಚಾಮುಂಡೇಶ್ವರಿ ಹಾಗೂ ಶ್ರೀಕಂಠೇಶ್ವರ ಸ್ವಾಮಿಯ ಭಕ್ತರು ಸಹ ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕಾರ್ಯಕ್ರಮದ ಬೆಂಬಲಕ್ಕೆ ನಿಂತರು. ಇದರಿಂದಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಒಂದು ಗುಂಪು ಶ್ರೀ ಶ್ರೀಕಂಠೇಶ್ವರ ನಿಗೆ ಜಯಕಾರ ಕೂಗಿದರೆ ದಸಂಸ ಕಾರ್ಯಕರ್ತರು ಮಹಿಷಾಸುರನಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಬಳಿಕ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ನಂತರ ದೇವಾಲಯದ ಆಗಮಿಕರು ಮತ್ತು ರಂಗೋಲಿಗೆ ಪೂಜೆ ಸಲ್ಲಿಸಿದ ಸಂದರ್ಭ ಹಾಗೂ ಪಾರ್ವತಿಗೆ ಉತ್ಸವಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ತಂದ ಭಕ್ತರು ರಂಗೋಲಿ ಚಿತ್ರ ಹಾಗೂ ಬ್ಯಾನರನ್ನು ತುಳಿದು ಉತ್ಸವವನ್ನು ದೇವಾಲಯದ ಕಡೆಗೆ ಕೊಂಡೊಯ್ದದರು.


ಕಾರ್ಯಕ್ರಮ ಮುಗಿದ ನಂತರ ಎರಡು ಗುಂಪಿನವರು ಪೊಲೀಸರಿಗೆ ದೂರು ನೀಡಿ ನಮ್ಮ ನಮ್ಮ ಧಾರ್ಮಿಕತೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಪರಸ್ಪರ ಆರೋಪಿಸಿದ್ದಾರೆ. ದಸಂಸ ಮುಖಂಡರುಗಳಾದ ಚುಂಚನಹಳ್ಳಿ ಮಲ್ಲೇಶ್, ಮಲ್ಲಳ್ಳಿ ನಾರಾಯಣ, ಶಂಕರಪುರ ಸುರೇಶ್,ಮಂಜು, ಸಿದ್ದು, ಬಾಲರಾಜು ಸೇರಿದಂತೆ ನೂರಾರು ಭಕ್ತರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು