10:51 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಆರದ ಎರಡು ಕೋಮುಗಳ ಸಂಘರ್ಷ: ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆ

06/02/2024, 18:42

*ಹಲ್ಲರೆ ಗ್ರಾಮದ ಎರಡು ಕೋಮುಗಳ ಸಂಘರ್ಷಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತದ ವೈಫಲ್ಯವೇ ಕಾರಣ ಪ್ರತಿಭಟನೆಯಲ್ಲಿ ಗಂಭೀರ ಆರೋಪ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ಘರ್ಷಣೆ ಪ್ರಕರಣ ಖಂಡಿಸಿ ತಾಲ್ಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಹಲ್ಲರೆ ಗ್ರಾಮದಲ್ಲಿ ನಡೆದ ಘಟನೆ ಖಂಡಿಸುತ್ತೇವೆ ಹಾಗೂ ನಾಯಕ ಜನಾಂಗದವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಿರಪರಾಧಿಗಳನ್ನು ಪೊಲೀಸರು ಕೂಡಲೇ ಬಿಡುಗಡೆ ಮಾಡಬೇಕು. ಗಲಾಟೆಗೆ ಪ್ರೇರೇಪಣೆ ನೀಡಿದವರನ್ನು ಕೂಡಲೇ ಬಂಧಿಸಬೇಕು. ಈ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಹಾಗೂ ಗ್ರಾಮದಲ್ಲಿ ಶಾಂತಿ ಸಭೆಯನ್ನು ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದರು. ನಂತರ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ನಂಜನಗೂಡಿನ ಡಿವೈಎಸ್ಪಿ ರಘು ರವರಿಂದ ಬಿಗಿ ಪೊಲೀಸ್ ಬಂದೋಬಸ್ತು ನೀಯೋಜನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ನಾಯಕ ಜನಾಂಗದ ಗೌರವಾಧ್ಯಕ್ಷ ಚಿಕ್ಕ ರಂಗನಾಯಕ,ತಾಲೂಕು ಅಧ್ಯಕ್ಷರಾದ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಖಜಾಂಚಿ ರಂಗಸ್ವಾಮಿ ಮುಖಂಡರಾದ ಹೆಡತಲೆ ನಾಗರಾಜು, ದೊರೆಸ್ವಾಮಿನಾಯಕ,ಕೆ ಡಿ ಮಂಜು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧ್ಯಕ್ಷ ರಾಮಚಂದ್ರು, ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಕಾಟೂರು ದೇವರಾಜ್ ಶಿವನಂಜನಾಯ್ಕ, ಶಿವಣ್ಣ, ಮಹಾದೇವ ನಾಯಕ ಹಾಗೂ ಮಹಿಳೆಯರು ಸೇರಿದಂತೆ ಸಾವಿರಾರು ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು