6:33 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಮನೆಗಳಿಗೆ ಕಲ್ಲು ತೂರಾಟ: ವಾಹನಗಳು ಜಖಂ, ಹಲವರಿಗೆ ಗಾಯ; ಉದ್ವಿಗ್ನ ಪರಿಸ್ಥಿತಿ

30/01/2024, 15:52

*ಕಿಡಿಗೇಡಿಗಳು ಪುಂಡರು ದೊಣ್ಣೆ ಮಾರಕಸ್ತ್ರಗಳನ್ನು ಹಿಡಿದು ಬಡಾವಣೆಗಳಿಗೆ ನುಗ್ಗಿ ಅಟ್ಟಹಾಸ ಮೆರೆದರು ಮೌನಕ್ಕೆ ಶರಣಾದ ನಂಜನಗೂಡು ಪೊಲೀಸರು*

*ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ*

*ಹತ್ತಕ್ಕೂ ಹೆಚ್ಚು ಮಂದಿಗೆ ಕಲ್ಲೇಟು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆಯಾಗಿ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ವಾಸದ ಮನೆಗಳಿಗೆ ಕಲ್ಲು ತೂರಾಟ ನಡೆಸಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಂಡಿದೆ. ಕೆಲ ಕಿಡಿಗೇಡಿಗಳಿಂದ ಹಲ್ಲರೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ‌.


ಗ್ರಾಮದ ಬೀದಿಯಲ್ಲೂ ಕಲ್ಲು ತೂರಾಟ ಮಾಡಲಾಗಿದ್ದು, ಹಲವರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಂಜನಗೂಡು ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಉಪ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಹಲ್ಲರೆ ಗ್ರಾಮದಲ್ಲಿ ಬಿಡು ಬಿಟ್ಟಿದ್ದಾರೆ. ಅಲ್ಲಾರೆ ಗ್ರಾಮದಲ್ಲಿ ಪದೇ ಪದೇ ಇಂತಹ ಕಲುಷಿತ ವಾತಾವರಣ ನಿರ್ಮಾಣವಾದರೂ ನಂಜನಗೂಡು ಗ್ರಾಮಾಂತರ ಪೊಲೀಸರ ನಿರ್ಲಕ್ಷ ಕಾರ್ಯಕ್ರಮ ಎತ್ತಿ ತೋರಿಸುತ್ತಿದೆ.
ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು