11:56 AM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ನಂಜನಗೂಡು: ಹನುಮ ಜಯಂತಿ ಪ್ರಯುಕ್ತ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ

12/07/2024, 20:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಶ್ರೀ ವೀರಾಂಜನೇಯ ಧರ್ಮ ಜಾಗೃತಿ ಬಳಗದ ವತಿಯಿಂದ 10ನೇ ವರ್ಷದ ಹನುಮ ಜಯಂತಿ ಪ್ರಯುಕ್ತ ಲೋಕಕಲ್ಯಾಣಾರ್ಥ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮತ್ತು ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಗೃತಿ ಬಳಗದ ಸಂಚಾಲಕ ಸುನಿಲ್ ತಿಳಿಸಿದ್ದಾರೆ.
ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ನಂಜನಗೂಡಿನಲ್ಲಿ ಜುಲೈ 20ರಂದು ನಡೆಯಲಿರುವ ಹನುಮ ಜಯಂತಿ ಪ್ರಯುಕ್ತ ಜುಲೈ 13ರ ಶನಿವಾರ ಸಂಜೆ 6.30ಕ್ಕೆ ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮೈಸೂರಿನ ಅವಧೂತ ದತ್ತಪೀಠದ ಉತ್ತರಾಧಿಪತಿ ಪೂಜ್ಯ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಹಾಗಾಗಿ 10ನೇ ವರ್ಷದ ಈ ಧಾರ್ಮಿಕ ಕಾರ್ಯಕ್ರಮಕ್ಕೆ ನಗರದ ಎಲ್ಲಾ ಸಂಘಟಕರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡರು.
ಗೋಷ್ಠಿಯಲ್ಲಿ ಬಳಗದ ಮುಖಂಡರುಗಳಾದ ಅನಂತ, ಆನಂದ್, ನಿತಿನ್, ಮಹದೇವ, ಸಲಹಾ ಸಮಿತಿ ಸದಸ್ಯರಾದ ಆನಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು