9:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂಜನಗೂಡು ಸಮೀಪದ ಹರತಲೆ ಗ್ರಾಮದಲ್ಲಿ ಸಂಭ್ರಮ- ಸಡಗರದಿಂದ ನಡೆದ ಶ್ರೀ ರಾಮೋತ್ಸವ: ಮರ್ಯಾದ ಪುರುಷನ‌ ಭವ್ಯ ಮೆರವಣಿಗೆ

26/02/2024, 21:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಮರ್ಯಾದ ಪುರುಷ ಶ್ರೀ ರಾಮನ ಉತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾದ ಶ್ರೀ ರಾಮನ ಭಾವಚಿತ್ರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ಹೂವಿನ ಪಲ್ಲಕ್ಕಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.


ಶ್ರೀ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಗ್ರಾಮದ ಮುಖಂಡ ಚಿಕ್ಕರಂಗನಾಯಕ ಉತ್ಸವಕ್ಕೆ ಚಾಲನೆ ನೀಡಿದರು.
ಬಳಿಕ ಉತ್ಸವವು ಸತ್ತಿಗೆ, ಸುರಪಾಣಿ, ಛತ್ರಿ ಚಾಮರ ಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು ಮೆರವಣಿಗೆಯುದ್ದಕ್ಕೂ ಗ್ರಾಮದ ಮಹಿಳೆಯರು ಪೂಜಾ ಸಾಮಗ್ರಿಗಳೊಂದಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ಗ್ರಾಮದ ಮುಖಂಡರು ಹಾಗೂ ಯುವಕರು ತಮಟೆ ವಾದ್ಯಕ್ಕೆ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರೆ, ಮಂಗಳವಾದ್ಯ, ತಮಟೆ ವಾದ್ಯ, ಕಂಸಾಳೆ ಕುಣಿತ ಸೇರಿದಂತೆ ವಿವಿಧ ಜಾನಪದಗಳು ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.
ಶ್ರೀ ರಾಮೋತ್ಸವದ ಪ್ರಯುಕ್ತ ಇಡೀ ಗ್ರಾಮವನ್ನೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿ ಒಂದು ರೀತಿ ಜಾತ್ರೆಯೋಪಾದಿಯಲ್ಲಿ ಶ್ರೀರಾಮನ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಗ್ರಾಮದ ಮುಖಂಡ ಹರ ತಲೆ ಚಿಕ್ಕರಂಗನಾಯಕ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಗೋವಿಂದ್ ರಾಜ್, ಯಜಮಾನರುಗಳಾದ ಚಿನ್ನಸ್ವಾಮಿ, ರಾಜು, ಚಿಕ್ಕಣ್ಣ,ಮರಿಗಂಡ ನಾಯಕ ಸೇರಿದಂತೆ ಕಳಲೆ ಗಡಿ ಯಜಮಾನರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು