9:30 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ನಂಜನಗೂಡಿನ ಹೆಗ್ಗಡಹಳ್ಳಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ

24/06/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಂಜನಗೂಡು ತಾಲೂಕು ಘಟಕದ ವತಿಯಿಂದ ಇಂದು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಗ್ರಾಮ ಘಟಕದ ನಾಮಫಲಕ ಅನಾವರಣ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹಾಗೂ ಮತ್ತಿತರ ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ನೆರವೇರಿಸಿದರು.
ಬಳಿಕ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ರೈತ ಸಂಘಟನೆ ಸ್ಥಾಪಿತವಾಗಿದೆ ರೈತರಿಗಾಗಿ, ರೈತರ ಬದುಕಿಗಾಗಿ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದೆ ಅಂತೆಯೇ ಈಗ ಈ ಭಾಗದ ಕಬಿನಿ ಜಲಾಶಯ ತುಂಬಿದ್ದು ಜಲಾಶಯದ ನಾಲೆಗಳ ವ್ಯಾಪ್ತಿಗೆ ಬರುವ ಎಚ್ ಡಿ ಕೋಟೆ, ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಶಾಸಕರು ಕೂಡಲೇ ರೈತರ ಸಭೆ ಕರೆದು ತಕ್ಷಣವೇ ಸರಿಯಾದ ಸಮಯಕ್ಕೆ ನೀರು ಬಿಟ್ಟು ಬಿತ್ತನೆ ಬೀಜ ಪೂರೈಕೆ ಮಾಡಬೇಕು. ತಡವಾದಲ್ಲಿ ಹೋರಾಟಕ್ಕೆ ಸಿದ್ಧವಾಗಬೇಕು ಎಂದು ಹೆಗ್ಗಡಹಳ್ಳಿ ರೈತ ಜಾಗೃತಿ ಸಭೆಯಿಂದಲೇ ಶಾಸಕರಿಗೆ ಎಚ್ಚರಿಕೆ ನೀಡುವ ಸಂದೇಶ ಕಳಿಸೋಣ ಎಂದು ರೈತರಿಗೆ ಕರೆ ನೀಡಿದರು.
ರಾಜ್ಯ ರೈತ ಸಂಘದ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ಮಾತನಾಡಿ, ರೈತ ಸಂಘ ಎಂದರೇನು? ಅದರ ದ್ಯೇಯೋದ್ದೇಶ, ಅದರಿಂದ ಆಗುವ ಅನುಕೂಲದ ಬಗ್ಗೆ ಮತ್ತು ಯಾವ ಕಾರಣಕ್ಕೆ ರೈತರಿಗೆ ಸಂಘಟನೆ ಬೇಕು ಎನ್ನುವುದರ ಬಗ್ಗೆ ಸಾರ್ವಜನಿಕರಲ್ಲಿ ರೈತ ಸಂಘಟನೆಯ ಬಗ್ಗೆ ಅರಿವು ಮೂಡಿಸಿದರು.
ಇದೇ ಸಂದರ್ಭ ಗ್ರಾಮದ ನೂರಾರು ಮುಖಂಡರು ಹಾಗೂ ಯುವಕರು ನೂತನವಾಗಿ ರೈತ ಸಂಘಕ್ಕೆ ಸೇರ್ಪಡೆಗೊಂಡರು.
ಹೊಸದಾಗಿ ಸೇರ್ಪಡೆಗೊಂಡ ಸದಸ್ಯರನ್ನು ರಾಜ್ಯ ಹಾಗೂ ಜಿಲ್ಲಾ ರೈತ ಮುಖಂಡರು ಹಸಿರು ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹಿಮ್ಮಾವುರಘು, ಹರತಲೆ ಕೆಂಪಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೋಜ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ, ಪ್ರಕಾಶ್, ಮಹದೇವಸ್ವಾಮಿ, ಶ್ವೇತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು