8:16 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನಂಜನಗೂಡು: ಹೈಟೆಕ್ ಶೌಚಾಲಯ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ

03/12/2023, 14:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ಶೌಚಾಲಯ ನಿರ್ಮಾಣ ಮಾಡಲು ಗುದ್ದಲಿ ಪೂಜೆಯನ್ನು ನೆರವೇರಿಸಿದ್ದೇನೆ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿನಿಯರಿಗಾಗಿ ಹೈಟೆಕ್ ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ.


ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ.
ಇದಲ್ಲದೆ ಕಾಲೇಜಿಗೆ ಬೇಕಾದಂತಹ ಅಗತ್ಯ ಸೌಲಭ್ಯಗಳು ಕಾಲೇಜಿನ ಸುತ್ತಲೂ ಕಾಂಪೌಂಡ್ ನಿರ್ಮಾಣ , ಕಾಲೇಜು ದುರಸ್ತಿ ಕಾಮಗಾರಿ ಗಳಿಗೆ ಕ್ರಮ ವಹಿಸುತ್ತೇನೆ. ವಿದ್ಯಾರ್ಥಿಗಳಿಗೆ ಬೇಕಾದ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಲೇಜಿನ ಪ್ರಾಂಶುಪಾಲೆ ರೇಣುಕಾ ಬಾಯಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ನಗರ ಸಭಾ ಸದಸ್ಯರುಗಳಾದ ಗಾಯತ್ರಿ, ಮಹೇಶ್,ಗಂಗಾಧರ, ಪ್ರೊ. ಜಗದೀಶ್, ಹರೀಶ್ ಕುಮಾರ್, ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು