12:46 AM Monday23 - December 2024
ಬ್ರೇಕಿಂಗ್ ನ್ಯೂಸ್
ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ

ಇತ್ತೀಚಿನ ಸುದ್ದಿ

ನಂಜನಗೂಡು: ಹುಲ್ಲಹಳ್ಳಿ ಹಾಗೂ ಕಳಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

06/04/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಾಂಗ್ರೆಸ್ ವತಿಯಿಂದ ಹುಲ್ಲಹಳ್ಳಿ ಹಾಗೂ ಕಳಲೆ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು.
ಸಭೆಯ ಉದ್ಘಾಟನೆಯನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಸೇರಿದಂತೆ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ವಿಧಾನಸಭಾ ಚುನಾವಣೆಯಂತೆ ಈ ಚುನಾವಣೆಯಲ್ಲಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಗುವುದಿಲ್ಲ. ಹಾಗಾಗಿ ಈ ರೀತಿ ಜಿಲ್ಲಾ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಸಭೆ ಕರೆದು ಮತಯಾಚನೆ ಮಾಡುತ್ತಿದ್ದೇನೆ.


ನಾನು ಕೂಡ ನಂಜನಗೂಡಿನಲ್ಲಿ ಹುಟ್ಟಿದವನು. ಹಾಗಾಗಿ ನಿಮ್ಮ ಮನೆಯ ಮಗನೆಂದು ತಿಳಿದು ನನಗೆ ಆಶೀರ್ವದಿಸಿ. ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತ ಮುಖಂಡರಿಗೆ ತಿಳಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ್ ಕುಮಾರ್ ಮಾತನಾಡಿ, ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಆಯಾಯ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಹುಲ್ಲಹಳ್ಳಿ ಬಸವರಾಜ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ,ಮುಖಂಡರುಗಳಾದ ಇಂಧನ ಬಾಬು, ಬುಲೆಟ್ ಮಹಾದೇವಪ್ಪ, ಮಂಜುನಾಥ್, ಗಿರೀಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಕಳಲೆ ಮಹೇಶ್, ಕರಳಪುರ ನಾಗರಾಜ್, ಚಾಮರಾಜ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು