ಇತ್ತೀಚಿನ ಸುದ್ದಿ
ನಂಜನಗೂಡು: ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
24/02/2024, 21:06
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆಇಂದು ಹುಣ್ಣಿಮೆ ಪ್ರಯುಕ್ತ ಭಕ್ತ ಸಾಗರವೇ ಹರಿದು ಬಂದಿದೆ.
ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.
ಹುಣ್ಣಿಮೆ ಪ್ರಯುಕ್ತ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ಫಲಪಂಚಾಮೃತಾಭಿಷೇಕ, ಕ್ಷೀರ, ಎಳನೀರು ಹಾಗೂ ಗಂಗಾ ಜಲದ ಅಭಿಷೇಕಗಳನ್ನು ನೆರವೇರಿಸಿ ಬಗೆಬಗೆಯ ಪುಷ್ಪಗಳಿಂದ ಶ್ರೀ ನಂಜುಂಡೇಶ್ವರ ಸ್ವಾಮಿಯನ್ನು ಅಲಂಕೃತಗೊಳಿಸಿ ನಂತರ ಮಹಾಮಂಗಳಾರತಿಯೊಂದಿಗೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ವಿವಿಧೆಡೆಯಿಂದ ಬಂದ ಸಾವಿರಾರು ಭಕ್ತರು ಇಂದು ಬೆಳಿಗ್ಗೆಯಿಂದಲೇ ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ಉರುಳು ಸೇವೆ, ಧೂಪ ದೀಪದ ಸೇವೆ, ತುಲಾಭಾರ ಸೇವೆ ಮಾಡಿ ಭಕ್ತಿ ಭಾವ ಮೆರೆದು
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ. ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.