1:27 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ

29/03/2024, 12:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಬೆಳಗ್ಗೆ ರಥಾರೋಹಣ ನಡೆದ ಮೇಲೆ ರಾತ್ರಿ ವೇಳೆಗೆ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಆಂಡಾಳಮ್ಮ ಹಾಗೂ ಶ್ರೀ ಅರವಿಂದ ನಾಯಕಿ ಅಮ್ಮನವರ ಸಮೇತ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಹೊರ ತೆಗೆದು ಬಳಿಕ ಮೇಲುಕೋಟೆ ಶ್ರೀ ವೈರಮುಡಿ ಉತ್ಸವದ ಮಾದರಿಯಲ್ಲಿ ವಿಶೇಷವಾಗಿ ಹೂಗಳಿಂದ ಅಲಂಕರಿಸಲಾದ ಉತ್ಸವ ಮೂರ್ತಿಗಳನ್ನು ಶುಕ್ರವಾರದ ಬೆಳಗಿನ ಜಾವದವರೆಗೂ ಗ್ರಾಮದಲ್ಲಿ ಉತ್ಸವ ನಡೆಸಲಾಗುತ್ತದೆ. ವಿದ್ಯುತ್ ದೀಪಗಳಿಂದ ವಿಶೇಷವಾಗಿ ಮಂಟಪದ ರೀತಿಯಲ್ಲಿ ಅಲಂಕರಿಸಿದ ನಡು ಚಪ್ಪರದಲ್ಲಿ ಅಲಂಕೃತ ಉತ್ಸವ ಮೂರ್ತಿಗಳನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತು ನಡೆಸುವ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ತೇರಡಿ ಉತ್ಸವದ ಅಂಗವಾಗಿ ಗ್ರಾಮದ ಎಲ್ಲ ದೇವಾಲಯಗಳು ಸೇರಿದಂತೆ ರಥ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಹೋರಾತ್ರಿ ಮಂಗಳವಾದ್ಯ ಗೋಷ್ಠಿಗಳು ನಡೆದವು.
ತಿಂಡಿ ತಿನಿಸು, ಪೂಜಾ ಸಾಮಗ್ರಿಗಳು, ಸ್ಟೇಷನರಿ, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದು ವ್ಯಾಪಾರ ವಹಿವಾಟುಗಳು ಜೋರಾಗಿಯೇ ನಡೆದವು.
ಗ್ರಾಮವು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ತೇರಡಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ದೇವಾಲಯದ ಪಾರುಪತೆಗಾರ ಜಯರಾಮ್ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ತೇರಡಿ ಉತ್ಸವವು ಅದ್ದೂರಿಯಾಗಿ ನಡೆಯಿತು. ಆಗಮಿಕರಾದ ವಿನಯ್ ಭಟ್ ಮಾತನಾಡಿ ಉತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು