3:13 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಕಣ್ಣೆದುರಿನಲ್ಲೇ ಸಾಕಿದ ಎರಡು ಹಸುಗಳನ್ನು ಎಳೆದೊಯ್ದ ವ್ಯಾಘ್ರ; ಕಣ್ಣೀರಿಟ್ಟ ದಂಪತಿ

03/02/2022, 22:01

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಟ್ರೀಯ.ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ. ಕಣ್ಣ ಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು