7:03 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕಪಿಲ ನದಿಯ ಸುಳಿಗೆ ಸಿಲುಕಿ ಬಾಲಕ ಸಹಿತ 3 ಮಂದಿ ಅಯ್ಯಪ್ಪ ಮಾಲಾಧಾರಿಗಳ ದಾರುಣ ಸಾವು

19/01/2024, 15:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳುದಿರುವ ಘಟನೆ ನಡೆದಿದೆ.
ತುಮಕೂರು ಮೂಲದ ಗವಿ ರಂಗ 19 ವರ್ಷ ರಾಕೇಶ್ 19 ವರ್ಷ ಹಾಗೂ ಅಪ್ಪು 16 ವರ್ಷದ ಅಯ್ಯಪ್ಪ ಮಾಲದಾರಿಗಳು ಕಪಿಲಾ ನದಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.


ಅಯ್ಯಪ್ಪನ ದರ್ಶನ ಮುಗಿಸಿಕೊಂಡು ತಡರಾತ್ರಿ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡುವ ಸಲುವಾಗಿ ಆಗಮಿಸಿದ ಅಯ್ಯಪ್ಪ ಭಕ್ತರು ಬೆಳಂಬೆಳಗ್ಗೆ ಸ್ನಾನ ಮಾಡಿ ನಂಜನಗೂಡಿನ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದರ್ಶನ ಮಾಡುವ ಸಲುವಾಗಿ ಸ್ನಾನಕ್ಕೆಂದು ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ 5 ಜನ ಮಾಲಾದಾರಿಗಳು ನೀರಿಗಿಳಿದು ಸುಳಿಗೆ ಸಿಲುಕಿದ ಪರಿಣಾಮ ಮೂವರು ಮೇಲೆಳಲಾಗದೆ ಮೃತಪಟ್ಟರೆ ಇಬ್ಬರು ಮಾಲದಾರಿಗಳು ಜೀವ ರಕ್ಷಿಸಿಕೊಂಡಿದ್ದಾರೆ.
ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಮೂರು ಮಂದಿ ಮಾಲಾಧಾರಿಯ ಶವಗಳನ್ನು ಹೊರ ತೆಗೆಯಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು