2:36 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಕೋಮು ಘರ್ಷಣೆಗೀಡಾದ ಹಲ್ಲರೆ ಗ್ರಾಮಕ್ಕೆ ಶಾಸಕದ್ವಯರ ಭೇಟಿ; ಸಂತ್ರಸ್ತರಿಗೆ ಸಾಂತ್ವನ

04/02/2024, 22:57

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಇತ್ತೀಚೆಗೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ಇಬ್ಬರು ಶಾಸಕರು ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಕಲ್ಲು ತೂರಾಟದ ಘಟನೆಯಿಂದ ಒಬ್ಬ ಪೊಲೀಸ್ ಎಎಸ್ ಐ ಸೇರಿದಂತೆ ಎರಡೂ ಕೋಮಿನವರಿಗೂ ಸಣ್ಣಪುಟ್ಟ ಗಾಯಗಳಾಗಿತ್ತು. ಮನೆಯ ಮೇಲ್ಚಾವಣಿ ಹಾಗೂ ಕೆಲವು ವಾಹನಗಳು ಜಖಂಗೊಂಡಿದ್ದವು.
ಈ ಹಿನ್ನಲೆ ಪೊಲೀಸರು ಎರಡು ಕಡೆಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಹಿನ್ನೆಲೆ ಗ್ರಾಮ ಒಂದು ರೀತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.
ಇದರ ಸೂಕ್ಷ್ಮತೆ ಅರಿತು ಇದನ್ನು ತಿಳಿಗೊಳಿಸುವ ಉದ್ದೇಶದಿಂದ ಇಂದು ಶಾಸಕದ್ವಯರುಗಳಾದ ನಂಜನಗೂಡಿನ ಶಾಸಕ ದರ್ಶನ್ ಧ್ರುವನಾರಾಯಣ್ ಮತ್ತು ಎಚ್ ಡಿ ಕೋಟೆ ಶಾಸಕರಾದ ಅನಿಲ್ ಚಿಕ್ಕಮಾದು ಗ್ರಾಮಕ್ಕೆ ಭೇಟಿ ನೀಡಿ ಅಧಿಕಾರಿಗಳು ಮತ್ತು ಮುಖಂಡರ ಸಭೆ ನಡೆಸಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು.
ಸಭೆಯ ನಂತರ ಎರಡು ಕೋಮುಗಳ ಬೀದಿಗಳಿಗೆ ತೆರಳಿ ಹಾನಿಗೊಳಗಾಗಿದ್ದ ಮನೆಗಳು ಮತ್ತು ಸಮುದಾಯ ಭವನವನ್ನು ವೀಕ್ಷಣೆ ಮಾಡಿದರು.
ಇದೇ ಸಂದರ್ಭ ಎರಡು ಕೋಮಿನ ಸಂತ್ರಸ್ತ ಮಹಿಳೆಯರು ಶಾಸಕರಲ್ಲಿ ತಮ್ಮ ಅಳಲು ತೋಡಿಕೊಂಡು ನಮಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡರು.
ಸಂತ್ರಸ್ತರ ಅಹವಾಲು ಕೇಳಿದ ಶಾಸಕರು ನಾನಿರುವುದೇ ನಿಮಗಾಗಿ, ನೀವು ಯಾವುದಕ್ಕೂ ಹೆದರಬೇಡಿ. ನಾನು ನಿಮ್ಮ ಜೊತೆ ಇದ್ದೀನಿ. ನೀವು ಮತ ನೀಡಿ ನನ್ನನ್ನು ಶಾಸಕರನ್ನಾಗಿ ಮಾಡಿದ್ದೀರಾ. ನಿಮಗೆ ಅನ್ಯಾಯವಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಅವರಿವರ ಮಾತಿಗೆ ಮರುಳಾಗಬೇಡಿ, ಏನೇ ಇದ್ದರೂ ನನ್ನ ಬಳಿ ಹೇಳಿ ಎಂದರಲ್ಲದೆ ಘಟನೆಯಿಂದ ನೊಂದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಜೊತೆಗೆ ಒಂದು ತಿಂಗಳವರೆಗೆ ಉಚಿತ ಆಹಾರ ಪದಾರ್ಥಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ವಸಹಾಯ ಸಂಘದ ಹಣ ಕಟ್ಟುವುದಕ್ಕೂ ಒಂದು ತಿಂಗಳ ಕಾಲಾವಕಾಶ ಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದರು.
ಎರಡು ಕೋಮಿನಲ್ಲೂ ಮತ್ತೆ ಯಾರನ್ನೂ ಬಂಧಿಸದಂತೆ ಪೊಲೀಸರಿಗೂ ಸಹ ತಿಳಿಸಲಾಯಿತು.
ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಂವಿಧಾನ ಹಾಗೂ ಸಮಾಜದ ಎರಡು ಕಣ್ಣುಗಳಿದ್ದಂತೆ ಈಗ ಹೊರಗಿರುವ ಎಲ್ಲರೂ ಗ್ರಾಮಕ್ಕೆ ಬಂದ ನಂತರ ಒಂದು ಶಾಂತಿ ಸಭೆ ನಡೆಸಿ ಮತ್ತೆ ಅಣ್ಣ ತಮ್ಮಂದಿರಂತೆ ಸೌಹಾರ್ದಯುತವಾಗಿ ಬಾಳುವಂತೆ ಮಾಡಲಾಗುವುದು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಸಾಂತ್ವಾನದ ಮಾತುಗಳನ್ನಾಡುವ ಮೂಲಕ ಗ್ರಾಮಸ್ಥರಿಗೆ ಧೈರ್ಯ ತುಂಬಿದರು.


ಈ ಸಂದರ್ಭ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್ ರಾಜ್, ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಾ. ಕೃಷ್ಣರಾಜು ತಹಸಿಲ್ದಾರ್ ಶಿವಕುಮಾರ್ ಕಾಸನೂರ್, ಇ ಒ ರಾಜೇಶ್ ಜರಾಲ್ಡ್, ಡಿ ವೈ ಎಸ್ ಪಿ ರಘು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಭೀಮಪ್ಪ ರಾವ್ ವಡ್ಡರ್, ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು