8:35 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ನಂಜನಗೂಡು: ಕೌಶಲ್ಯ ತರಬೇತಿ ಪಡೆದ ಫಲಾನುಭವಿಗಳಿಗೆ ಸರ್ಟಿಫಿಕೇಟ್ ವಿತರಣೆ

21/09/2024, 09:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಕಸಿತ ಭಾರತದ ಪರಿಕಲ್ಪನೆಗಾಗಿ ಬಡವರ, ಹಿಂದುಳಿದ ಹಾಗೂ ವಿವಿಧ ಕುಲಕಸುಬು ಮತ್ತು ಕುಶಲಕರ್ಮಿಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆ ಇಂದು ಮಹಾರಾಷ್ಟ್ರದ ವಾರ್ದದಲ್ಲಿ ಪಿಎಂ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮೊದಲ ವಾರ್ಷಿಕ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.


ಇದರ ಪ್ರಯುಕ್ತ ಇಂದು ನಂಜನಗೂಡಿನ ಮೊಸಾಯಿಕ್ ವರ್ಕ್ ಪ್ರೈವೇಟ್ ಲಿಮಿಟೆಡ್ ನ ವತಿಯಿಂದ ಸಂಸ್ಥೆಯಲ್ಲಿ ವಿವಿಧ ಕಸುಬುಗಳ ತರಬೇತಿ ಪಡೆದ ನೂರಾರು ಫಲಾನುಭವಿಗಳಿಗೆ ತರಬೇತಿ ಹಾಗೂ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.
ಮಂಜುರಾತಿ ಪತ್ರಗಳನ್ನು ವಿತರಿಸಿ NSTI ಮುಖ್ಯಸ್ಥೆ ಸುಜಾತ ಹಾಗೂ ಮೊಸಾಯಿಕ್ ವರ್ಕ್ ಸ್ಕಿಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಮಾತನಾಡಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಇದಾಗಿದ್ದು ಇದರಲ್ಲಿ ತರಬೇತಿ ಪಡೆದ ಕುಶಲಕರ್ಮಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದೇ ಇದರ ಉದ್ದೇಶ ಹಾಗಾಗಿ ಸಣ್ಣ ಸಣ್ಣ ವ್ಯಾಪಾರಸ್ಥರು ಕುಶಲಕರ್ಮಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರುವಂತೆ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಈ ಯೋಜನೆಯಿಂದ ತರಬೇತಿ ಪಡೆದು ತರಬೇತಿ ಭತ್ಯದ ಜೊತೆಗೆ ಒಂದು ಲಕ್ಷ ರೂಪಾಯಿ ಸಾಲವನ್ನು ಪಡೆದುಕೊಂಡ ಕೆ. ಆರ್. ನಗರದ ಹೂ ಮಾರುವ ಶೋಭಾ ಎಂಬ ಮಹಿಳೆ ಮಾತನಾಡಿ ಇದೊಂದು ಒಳ್ಳೆಯ ಯೋಜನೆಯಾಗಿದ್ದು ನಮ್ಮಂತಹ ಬಡವರಿಗೆ ಸಹಾಯವಾಗಲಿದೆ ಎಂದು ತರಬೇತಿ ನೀಡಿದ ಸಂಸ್ಥೆ ಹಾಗೂ ಮೋದಿಜಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ನಂಜನಗೂಡು ಸೇರಿದಂತೆ ವಿವಿಧ ತಾಲೂಕುಗಳಿಂದ ಮಹಿಳೆಯರು ಸೇರಿದಂತೆ ಸಾವಿರಾರು ಮಂದಿ ತರಬೇತಿ ಪಡೆದ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ಮಹಾರಾಷ್ಟ್ರದ ವಾರ್ದದಲ್ಲಿ ನಡೆದ ಪಿಎಂ ವಿಶ್ವಕರ್ಮ ಯೋಜನೆಯ ಮೊದಲನೇ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಸಾರವನ್ನು ವೀಕ್ಷಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಆಶಿಶ್ ಶುಕ್ಲ, ಐಸಿಐಸಿಐ ಬ್ಯಾಂಕ್ ನ ಅಸಿಸ್ಟೆಂಟ್ ಮ್ಯಾನೇಜರ್ ಕವಿತಾ, ನಗರಸಭೆ ಅಧಿಕಾರಿ ಶಫಿ, ಕಾವೇರಿ ಗ್ರಾಮೀಣ ಬ್ಯಾಂಕ್ ಮ್ಯಾನೇಜರ್ ರೇಣುಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು