8:28 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ನಂಜನಗೂಡು: ಕೆಎಸ್ಸಾರ್ಟಿಸಿ- ಟಿಪ್ಪರ್ ನಡುವೆ ಓವರ್ ಟೇಕ್ ಸ್ಪರ್ಧೆ: ಬಸ್ಸಿನಲ್ಲಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್

25/01/2025, 18:39

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೇಕ್ ನಿಂದಾಗಿ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ನಡೆದಿದೆ.
ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ.
ಮೈಸೂರಿನಿಂದ -ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ಸಿನಲ್ಲಿ ಮೃತ ಮಹಿಳೆ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಬಸ್ಸಿನ ಕಿಟಕಿಯಿಂದ ಮಹಿಳೆ ಕತ್ತನ್ನು ಹೊರ ಹಾಕಿದ ಹಿನ್ನೆಲೆ ಟಿಪ್ಪರ್ ವಾಹನ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತ ನಡೆದಿದೆ. ಇದರ ಪರಿಣಾಮ ಬಸ್ಸಿನಲ್ಲಿ ಕುಳಿತ್ತಿದ್ದ ಶಿವಲಿಂಗಮ್ಮ ಎಂಬುವರ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.


ಅಪಘಾತಕ್ಕೆ ಕಾರಣವಾದ ಟಿಪ್ಪರ್ ವಾಹನ ಸ್ಥಳದಿಂದ ನಾಪತ್ತೆಯಾಗಿದೆ.ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿಗಳಾದ ಮಹೇಂದ್ರ ಜೊತೆಗೂಡಿ ಘಟನಾ ಸ್ಥಳವನ್ನು ಪರಿಶೀಲಿಸಿ ಸಾರಿಗೆ ಬಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ಮೃತ ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು