6:50 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು: ಎಲ್ಐಸಿ ಪ್ರತಿನಿಧಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

11/01/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಭಾರತೀಯ ಜೀವ ವಿಮಾ ಪ್ರತಿನಿಧಿಗಳ ಒಕ್ಕೂಟ ನಂಜನಗೂಡು ಶಾಖೆ ವತಿಯಿಂದ ಮೈಸೂರಿನ ಎಲ್ಐಸಿ ವಿಭಾಗೀಯ ಕಚೇರಿಯಲ್ಲಿ ಗುರುವಾರ 2024ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಸೇರಿದಂತೆ ಮತ್ತಿತರ ಗಣ್ಯರು ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಕ್ಯಾಲೆಂಡರ್ ಬಿಡುಗಡೆ ಮಾಡಿ ಎಲ್ಐಸಿ ವಿಭಾಗೀಯ ಅಧಿಕಾರಿ ಸತ್ಯನಾರಾಯಣ ಶಾಸ್ತ್ರಿ ಹಾಗೂ ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀನಾಥ್ ಮಾತನಾಡಿ, ತಮ್ಮ ಸಂಘಟನೆಯ ಜೊತೆಗೆ ನಂಜನಗೂಡು ಜೀವವಿಮಾ ಪ್ರತಿನಿಧಿಗಳು ಇಂತಹ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರಿಗೂ ಉಪಯುಕ್ತವಾಗಿರುವ ಕ್ಯಾಲೆಂಡರ್ ಸಿದ್ದಗೊಳಿಸಿ ಇಂದು ಬಿಡುಗಡೆ ಮಾಡಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಾರುಕಟ್ಟೆ ವ್ಯವಸ್ಥಾಪಕ ನಾಗೇಶ್ ರಾವ್, ಒಕ್ಕೂಟದ ಅಧ್ಯಕ್ಷ ಕೆಂಪೇಗೌಡ, ಉಪಾಧ್ಯಕ್ಷ ಬಿ. ಆರ್. ಚಿಕ್ಕಣ್ಣ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ ಗೌರವಾಧ್ಯಕ್ಷ ಎಚ್. ಆರ್. ಶಿವಕುಮಾರ್, ಸಹ ಕಾರ್ಯದರ್ಶಿ ಶಿವಣ್ಣ ಸದಸ್ಯರುಗಳಾದ ಗುರು ಸಿದ್ದಾಚಾರಿ , ಸೋಮಶೇಖರ್, ಮಹದೇವಯ್ಯ, ಈರೇಗೌಡ, ಶ್ರೀಧರ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು