12:28 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ನಂಜನಗೂಡು: ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಮತ್ತು ದೂರು ಸ್ವೀಕಾರ

10/01/2024, 22:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಇಂದು ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮವನ್ನು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಎಚ್ಚರಿಸಿದರು.


ಸಾರ್ವಜನಿಕರು ಏನಾದರೂ ನಮಗೆ ದೂರು ನೀಡಿದರೆ ನಿಮಗೆ ಖಂಡಿತ ತೊಂದರೆಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಚಾಟಿ ಬೀಸಿದರು.
ಬಳಿಕ ಸಾರ್ವಜನಿಕರು ನೀಡಿದ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಕೇಳಿ ತಿಳಿದುಕೊಂಡು ಸ್ಥಳದಲ್ಲೇ ಇದ್ದ ಅಧಿಕಾರಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.
ಜಮೀನುಗಳಿಗೆ ತೆರಳುವ ಸರ್ಕಾರಿ ಓಣಿ ಒತ್ತುವರಿ, ನಿವೇಶನಗಳ ಒತ್ತುವರಿ, ಆಶ್ರಯ ಮನೆಗಳಿಗೆ ಬಿಲ್ ಆಗದೇ ಇರುವುದು, ನಗರ ಸಭೆಯಲ್ಲಿ ಕಡತನಾಪತ್ತೆ ಹಾಗೂ ಖಾತೆ ಮಾಡಿಕೊಡುವುದರಲ್ಲಿ ಅಕ್ರಮ ವೆಸಗಿರುವ ಬಗ್ಗೆ ಸೇರಿದಂತೆ ಹಲವು ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಸಿ ಅವುಗಳನ್ನು ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದೇ ಸಂದರ್ಭ ಇಲಾಖಾವಾರು ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಸಕಾಲದಲ್ಲಿ ವಿಲೇವಾರಿ ಆಗದಿರುವ ಅರ್ಜಿಗಳ ಬಗ್ಗೆ ಪ್ರಶ್ನಿಸಿ ಅವುಗಳನ್ನು ಕೂಡಲೇ ಇತ್ಯರ್ಥ ಪಡಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳಿಂದ ಯಾವುದೇ ತೊಂದರೆ ಹಾಗೂ ವಿಳಂಬವಾಗಲಿ ನಮಗೆ ದೂರು ನೀಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಲೋಕೇಶ್, ರೂಪಶ್ರೀ, ರವಿಕುಮಾರ್ ಸಿಬ್ಬಂದಿಗಳಾದ ಗುರುಪ್ರಸಾದ್, ಮೋಹನ್ ಕುಮಾರ್, ಕಾಂತರಾಜು, ನೇತ್ರಾವತಿ ,ಶೇಖರ್, ಪರಶುರಾಮ್, ದಿನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು