12:55 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ನಂಜನಗೂಡು: ಮಾಜಿ ಸಂಸದ, ದಿವಂಗತ ಧ್ರುವನಾರಾಯಣ್ ಅಭಿಮಾನಿ ಬಳಗದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ

09/03/2024, 20:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದೇಶದ ಉತ್ತಮ ಸಂಸದ ಪಟು ಎಂದೆ ಖ್ಯಾತಿ ಪಡೆದಿದ್ದ ಮಾಜಿ ಸಂಸದ ದ್ರುವನಾರಾಯಣ್ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ನಂಜನಗೂಡಿನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಂಜುನಾಥ್ ತಿಳಿಸಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಧ್ರುವನಾರಾಯಣ್ ಅವರು ಕಾಲವಾಗಿ ಒಂದು ವರ್ಷ ಕಳೆದ ಹಿನ್ನೆಲೆ ಅವರ ಸ್ಮರಣಾರ್ಥ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆ ಮೈಸೂರು, ದೃವನಾರಾಯಣ್ ಅಭಿಮಾನಿ ಬಳಗ ನಂಜನಗೂಡು, ಲಯನ್ಸ್ ಸಂಸ್ಥೆ ಮತ್ತು ಅರವಿಂದ ಕಣ್ಣಿನ ಆಸ್ಪತ್ರೆ ಕೊಯಮತ್ತೂರು ಇವರ ಸಯುಕ್ತ ಆಶ್ರಯದಲ್ಲಿ ಉಚಿತ ಬೃಹತ್ ಕಣ್ಣಿನ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ ಎಂದರು.
ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ಎಲ್ಲಾ ಕಾಯಿಲೆಗಳನ್ನು ಪರೀಕ್ಷಿಸಿ ಅಗತ್ಯವಿದ್ದಲ್ಲಿ ರೋಗಿಗಳಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ಮಾಡಿಸಲಾಗುವುದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾಜಿ ಶಾಸಕ ಕಳೆದೆ ಕೇಶವಮೂರ್ತಿ ಕೆಪಿಸಿಸಿ ಕಾರ್ಯದರ್ಶಿಗಳಾದ ಶ್ರೀಕಂಠ ಮತ್ತು ಕಾವೇರಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಲಯನ್ ಸಂಸ್ಥೆ ಅಧ್ಯಕ್ಷ ಗೋಪಾಲಕೃಷ್ಣ ಕಾರ್ಯದರ್ಶಿ ನಾಗರಾಜ್ ಖಜಾಂಚಿ ಉಮೇಶ್ ಮುಖಂಡರುಗಳಾದ ಶ್ರೀನಿವಾಸ ಮೂರ್ತಿ ವಿಜಯ್ ಕುಮಾರ್ ನಾಗರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು