8:30 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ನಂಜನಗೂಡು: ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ: ಆಸ್ಪತ್ರೆಗೆ ದಾಖಲು

04/08/2024, 19:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಮೀನಿನಲ್ಲಿ ಮೇವು ಕಟಾವು ಮಾಡಲು ತೆರಳಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ನಡೆದಿದೆ.

ಬಸವಣ್ಣ ಎಂಬಾತ ಚಿರತೆ ದಾಳಿಗೆ ಸಿಲುಕಿ ಗಾಯಗೊಂಡ ರೈತ. ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಿಗ್ಗೆಯಿಂದ ಸರಿ ಸುಮಾರು ನಾಲ್ಕು ಗಂಟೆಯವರೆಗೂ ನಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸಿ ಮನೆಗೆ ತೆರಳಲು ಮುಂದಾದಾಗ ಮೇವು ಕಟಾವು ಮಾಡಲು ಜಮೀನಿನ ಒಳಭಾಗಕ್ಕೆ ತೆರಳಿದಾಗ ಏಕಾಏಕಿ ಚಿರತೆ ನನ್ನ ಮೇಲೆ ಎಗರಿತು. ನಾನು ಗಾಬರಿಯಾಗಿ ಜೋರಾಗಿ ಕೂಗಿದ ಬಳಿಕ ನನ್ನನ್ನು ಬಿಟ್ಟಿತು ಎಂದು ಗಾಯಗೊಂಡು ಆಸ್ಪತ್ರೆ ಸೇರಿರುವ ರೈತ ಅಳಲು ತೋಡಿಕೊಂಡರು. ಸಿಂಧುವಳ್ಳಿ ಗ್ರಾಮದ ಸುತ್ತಮುತ್ತ ಚಿರತೆ ಮತ್ತು ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ.ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮತ್ತು ಸಂಘಟಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು