11:54 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಶಾಸಕ ದರ್ಶನ್ ದ್ರುವ ನಾರಾಯಣ್ ಅವರಿಂದ ಜನ ಸಂಪರ್ಕ ಸಭೆ

18/06/2024, 17:51

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರದ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ನವಿಲೂರು, ಮುದ್ದಳ್ಳಿ, ಹೊಸಪುರ, ಏಚ್ ಗುಂಡ್ಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಲಾಯಿತು.


ತಹಸಿಲ್ದಾರ್ ಶಿವಕುಮಾರ್, ಕಾಸನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಗೆ ಸಾಥ್ ನೀಡಿದ್ದರು. ಗ್ರಾಮಸ್ಥರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ತಿಳಿದು ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವಂತಹ ಕಾರ್ಯಕ್ರಮ ಇದಾಗಿತ್ತು.ಸಭೆಯಲ್ಲಿ ಗ್ರಾಮಸ್ಥರು ಮಾತನಾಡಿ ಕೆಐಡಿಬಿ ಹಾಗೂ ಕಂದಾಯ ಇಲಾಖೆಯಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಂತೆ ,ರಸ್ತೆ ಅಭಿವೃದ್ಧಿ, ಚರಂಡಿ ಅವ್ಯವಸ್ಥೆ, ಬೀದಿ ದೀಪ, ಕುಡಿಯುವ ನೀರು, ಸ್ಮಶಾನ ಅಭಿವೃದ್ಧಿ, ದೇವಾಲಯಗಳ ಅಭಿವೃದ್ಧಿ ಸೇರಿದಂತೆ ತಮ್ಮ ಹತ್ತು ಹಲವು ಸಮಸ್ಯೆಗಳ ಜೊತೆಗೆ ಕೆಲವು ಅಧಿಕಾರಿಗಳ ಬೇಜವಾಬ್ದಾರಿತನದ ಬಗ್ಗೆಯೂ ಶಾಸಕರ ಗಮನಕ್ಕೆ ತಂದರು.
ಅದರಲ್ಲೂ ವಿಶೇಷವಾಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಗಂಡಸರು ಮದ್ಯದ ಚಟಕ್ಕೆ ಬಲಿಯಾಗಿ ನಮ್ಮ ಸಂಸಾರಗಳು ಹಾಗೂ ಜೀವನ ಬೀದಿಗೆ ಬಿದ್ದಿದೆ, ಮನೆಯಲ್ಲಿ ಹೆಂಡತಿ ಮಕ್ಕಳು ನೆಮ್ಮದಿಯಾಗಿ ಇರುವುದಕ್ಕೆ ಆಗುತ್ತಿಲ್ಲ ಹಾಗಾಗಿ ನೀವು ಯಾವುದೇ ಗ್ಯಾರಂಟಿ ಗಳನ್ನು ನೀಡುವುದೇ ಇದ್ದರೂ ಪರವಾಗಿಲ್ಲ ಯಾವುದೇ ಯೋಜನೆಗಳನ್ನು ಮಾಡದಿದ್ದರೂ ಪರವಾಗಿಲ್ಲ ಗ್ರಾಮದಲ್ಲಿ ಮದ್ಯ ಮಾರಾಟವನ್ನು ತಪ್ಪಿಸಿ ನಮ್ಮ ಜೀವನ ಹಾಗೂ ಬದುಕು ಹಸನಾಗುವಂತೆ ಮಾಡಿ ಎಂದು ಗ್ರಾಮದ ಮಹಿಳೆಯರು ಭಾವುಕರಾಗಿ ಶಾಸಕರಲ್ಲಿ ಅಲವತ್ತು ಕೊಂಡಿದ್ದು ವಿಶೇಷವಾಗಿತ್ತು.
ಮತ್ತೆ ಕೆಲ ರೈತರು ಮಾತನಾಡಿ, ಕೃಷಿ ಜಮೀನುಗಳ ಮಧ್ಯೆ ಕೆಲವರು ಅಕ್ರಮವಾಗಿ ಜಲ್ಲಿ ಕ್ರಷರ್ ನಡೆಸುತ್ತಿರುವುದರಿಂದ ಇದರ ಧೂಳಿನಿಂದಾಗಿ ರೈತರು ಯಾವುದೇ ಬೆಳೆ ಬೆಳೆಯುವುದಕ್ಕೆ ಆಗುತ್ತಿಲ್ಲ. ಜೊತೆಗೆ ಕೆಲವು ಕಾಯಿಲೆಗಳಿಗೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಇದನ್ನು ತಡೆಹಿಡಿಯಬೇಕು ಎಂದು ಕೇಳಿಕೊಂಡರು.
ಗ್ರಾಮಸ್ಥರ ಹತ್ತು ಹಲವಾರು ಸಮಸ್ಯೆಗಳನ್ನು ಆಲಿಸಿದ ಶಾಸಕರು ಮಾತನಾಡಿ ಜನ ಸಂಪರ್ಕ ಸಭೆಯ ಮುಖಾಂತರ ತಾಲೂಕು ಮಟ್ಟದ ಅಧಿಕಾರಿಗಳನ್ನು ತಮ್ಮ ಗ್ರಾಮಕ್ಕೆ ಕರೆಯಿಸಿ ತಮ್ಮ ಕುಂದು ಕೊರತೆ ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ನೀಡುವ ಉದ್ದೇಶದಿಂದ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸುತ್ತಾ ತಕ್ಷಣವೇ ಗ್ರಾಮದ ಎಲ್ಲಾ ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅದರಲ್ಲೂ ವಿಶೇಷವಾಗಿ ಗ್ರಾಮದಲ್ಲಿ ಮಧ್ಯ ಮಾರಾಟ ತಪ್ಪಿಸಿ ಮದ್ಯಮುಕ್ತ ಗ್ರಾಮವನ್ನಾಗಿಸುವಂತೆ ಸ್ಥಳದಲ್ಲಿಯೇ ಇದ್ದ ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸಭೆಗೆ ಗೈರು ಹಾಜರಾದ ಕೆಲವು ತಾಲೂಕು ಮಟ್ಟದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ತಹಸಿಲ್ದಾರ್ ವರಿಗೆ ಸೂಚನೆ ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದೆ ಇರುವ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಗ್ರಾಮಕ್ಕೆ ಬಂದ ಶಾಸಕರಿಗೆ ಹಾಗೂ ವೇದಿಕೆ ಮೇಲಿನ ಗಣ್ಯರಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಪೇಟ ತೊಡಿಸುವ ಮೂಲಕ ಗೌರವಿಸಿದರು

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವಣ್ಣ ಉಪಾಧ್ಯಕ್ಷೆ ನಳಿನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಟ್ಟಿ ಮಹೇಶ್, ಮುಖಂಡರಾದ ದೊರೆಸ್ವಾಮಿ ನಾಯಕ, ಶಿವಪ್ಪ ದೇವರು, ಮುದ್ದಳ್ಳಿ ಪ್ರಕಾಶ್ ಸೇರಿದಂತೆ ಗ್ರಾ,ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು