2:55 AM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ನಂಜನಗೂಡು: ನರಹಂತಕ ವ್ಯಾಘ್ರನ ಸೆರೆ ಕುರಿತು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದು ಏನು?; ಇನ್ನೆರಡು ದಿನಗಳೊಳಗೆ ಹುಲಿ ಬಲೆಗೆ ಬೀಳುತ್ತಾ?

27/11/2023, 20:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮಗಳ ಜನರನ್ನು ಬೆಚ್ಚಿ ಬೆಳಿಸಿರುವ ನರಭಕ್ಷಕ ಹುಲಿಯ ಸೆರೆಗೆ ಕೌಂಟ್ ಡೌನ್ ಶುರುವಾಗಿದೆ ಎಂದು ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದ್ದಾರೆ.
ರೈತರು ಮತ್ತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ನರಹಂತಕ ಹುಲಿಯನ್ನು ಇಂದು ಸಂಜೆ ಅಥವಾ ನಾಳೆ ಒಳಗಾಗಿ ಸೆರೆ ಹಿಡಿಯುತ್ತಾರೆ. ಈಗಾಗಲೇ ನೂರು ಜನ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 50ಕ್ಕೂ ಹೆಚ್ಚು ಕ್ಯಾಮರಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾದ ಮೂಲಕ ಹುಲಿಯ ಚಲನ ವಲನಗಳನ್ನು ಸೆರೆ ಹಿಡಿದು ಪತ್ತೆ ಹಚ್ಚಲಾಗಿದೆ.
ಹುಲಿ ಸಂರಕ್ಷಣಾ ಪ್ರಾಧಿಕಾರ ದೆಹಲಿಯಿಂದ ಈಗಾಗಲೇ ಹುಲಿ ಸೆರೆಗೆ ಪತ್ರ ರವಾನೆಯಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿ ನರಭಕ್ಷಕ ಹುಲಿ ಸರೆಗೆ ಮುಂದಾಗಿದ್ದಾರೆ ಎಂದರು.
ಹೆಡಿಯಾಲ ಮತ್ತು ಬಳ್ಳೂರು ಹುಂಡಿ ಗ್ರಾಮದ ಸುತ್ತಮುತ್ತಲ ಸಾರ್ವಜನಿಕರು ರೈತರು ಮಹಿಳೆಯರು ಆತಂಕ ಪಡುವುದು ಬೇಡ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಯಾರು ಭಯಪಡುವುದು ಬೇಡ. ಹೆಡಿಯಾಲ ಮತ್ತು ಓಂಕಾರ ಅರಣ್ಯ ವಲಯದಲ್ಲಿ ಅಧಿಕಾರಿಗಳು ಒಮ್ಮತದಿಂದ ಕಾರ್ಯನಿರ್ವಹಿಸುತ್ತಿಲ್ಲ.
ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷತನ ಎದ್ದು ಕಾಣುತ್ತಿದೆ.
ವಿಧಾನಸೌಧದ ಅಧಿವೇಶನದ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ ಮತ್ತು ಲೋಪದ ಬಗ್ಗೆ ಚರ್ಚಿಸಿ
ನಿರ್ಲಕ್ಷ್ಯತನದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ. ಈಗಾಗಲೇ ಹೆಡಿಯಾಲ ಮತ್ತು ಓಂಕಾರ ಅರಣ್ಯ ಪ್ರದೇಶದ ಅಭಿವೃದ್ಧಿಯ ಹೆಸರಿನಲ್ಲಿ ಲೋಪ ದೋಷಗಳು ನಡೆದಿದ್ದು ಅದರ ತನಿಖೆಗೂ ಮುಂದಾಗುತ್ತೇವೆ
ಎಂದು ಮಾಧ್ಯಮದವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು