10:13 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನಂಜನಗೂಡು: ಪಂಚ ಮಹಾ ರಥೋತ್ಸವ, ದೊಡ್ಡ ಜಾತ್ರೆ ಪ್ರಯುಕ್ತ ಪೂರ್ವಭಾವಿ ಸಭೆ

06/03/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಪವಿತ್ರ ಯಾತ್ರಾಸ್ಥಳವಾದ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 22ರಂದು ಜರುಗಲಿರುವ ಪಂಚ ಮಹಾ ರಥೋತ್ಸವ ಹಾಗೂ ದೊಡ್ಡ ಜಾತ್ರೆ ಅಂಗವಾಗಿ ಪೂರ್ವಭಾವಿ ಸಿದ್ಧತಾ ಸಭೆ ದೇವಾಲಯದ ದಾಸೋಹ ಭವನದಲ್ಲಿ ನಡೆಯಿತು.


ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಶಾಸಕ ದರ್ಶನ್ ಧ್ರುವನಾರಾಯಣ್ ವಹಿಸಿದ್ದರು. ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಮಾರ್ಚ್ 22 ರಂದು ನಡೆಯಲಿರುವ
ದೊಡ್ಡ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಯಾವೊಬ್ಬ ಭಕ್ತರಿಗೂ ತೊಂದರೆ ಹಾಗೂ ಅವಘಡಗಳು ಸಂಭವಿಸದಂತೆ ಬಹಳ ಎಚ್ಚರಿಕೆ ವಹಿಸಿ ಜಾತ್ರೆಯನ್ನು ಯಶಸ್ವಿ ಗೊಳಿಸುವಂತೆ ಎಲ್ಲ ಇಲಾಖೆಗಳು ಸೇರಿದಂತೆ ಏಳು ಗ್ರಾಮಸ್ಥರು ಸಹ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಿ ಇದಕ್ಕೆ ನಮ್ಮ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುತ್ತದೆ ಎಂದರು.
ರಥೋತ್ಸವದ ವೇಳೆ ಯಾವುದೇ ಸಾವು ನೋವು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ಇಲಾಖೆ ಹೆಚ್ಚಿನ ಭದ್ರತಾ ವ್ಯವಸ್ಥೆ ಹಾಗೂ ಸಿಸಿ ಕ್ಯಾಮೆರಾ ಗಳನ್ನ ಅಳವಡಿಸುವಂತೆ ಸೂಚಿಸಿದರು.
ಚೆಸ್ಕಾಂ, ಲೋಕೋಪಯೋಗಿ , ನಗರಸಭೆ, ನೀರಾವರಿ, ಆರೋಗ್ಯ ,ರೈಲ್ವೆ, ಸಾರಿಗೆ ಸೇರಿದಂತೆ ಎಲ್ಲಾ ಇಲಾಖೆಗಳು ಜಾತ್ರೆಗೆ ಸಂಬಂಧಿಸಿದಂತೆ ಸ್ವಚ್ಛತೆ ನದಿಗೆ ನೀರು ಹರಿಸುವುದು ದೀಪಾಲಂಕಾರ ಭಕ್ತರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಮೂಲಕ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇದೇ ಸಂದರ್ಭ ಸಭೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಬರದ ಕಾರಣ ಗರಂ ಆದ ಜಿಲ್ಲಾಧಿಕಾರಿಗಳು ತಕ್ಷಣವೇ ಜಿಲ್ಲಾ ಮಟ್ಟದ ಅಧಿಕಾರಿಗಳು ಬರುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿ ಸಭೆಗೆ ಕರೆಸಿಕೊಂಡ ಘಟನೆಯು ನಡೆಯಿತು.
ಸಭೆಯಲ್ಲಿ ಅಧಿಕಾರಿಗಳು ಸಾರ್ವಜನಿಕರು ಹಾಗೂ 7 ಗ್ರಾಮದ ಮುಖಂಡರು ಮಾತನಾಡಿ ಜಾತ್ರೆಯ ಬಗ್ಗೆ ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಇದೇ ಸಂದರ್ಭ ಜಾತ್ರೆಗೆ ನಮ್ಮ ಏಳು ಗ್ರಾಮದವರ ಪಾತ್ರ ಬಹಳ ಮುಖ್ಯವಾಗಿದ್ದು ನಮಗೆ ದೇವಾಲಯದಲ್ಲಿ ನೌಕರಿ ಸೇರಿದಂತೆ ಧರ್ಮದರ್ಶಿ ಸ್ಥಾನವನ್ನು ನೀಡಬೇಕು ಈಗ ನೀಡುವ ಗೌರವಧನ ಸಾಕಾಗುವುದಿಲ್ಲ ಅದನ್ನು ಹೆಚ್ಚು ಮಾಡಬೇಕು ಎಂದು ತಮ್ಮ ಬೇಡಿಕೆ ಇಟ್ಟರು.
ನಂತರ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಡೆಯುವ ನಂಜನಗೂಡು ದೊಡ್ಡ ಜಾತ್ರೆಗೆ ರಾಜ್ಯದ ವಿವಿಧ ಕಡೆಯಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಅವರಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಭದ್ರತೆ ಹಾಗೂ ರಕ್ಷಣೆ ನೀಡುವ ಜವಾಬ್ದಾರಿ ನಮ್ಮದಾಗಿದೆ. ಹಾಗಾಗಿ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಯಶಸ್ವಿ ಜಾತ್ರೆ ನಡೆಸುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅರ್ಚಕರು ಸೇರಿದಂತೆ ದೇವಾಲಯದ ಸಿಬ್ಬಂದಿಗಳು ಮತ್ತು ಏಳು ಗ್ರಾಮದ ಮುಖ್ಯಸ್ಥರು ಹಾಗು ಸಾರ್ವಜನಿಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು