10:07 AM Saturday25 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ- ಸಂಭ್ರಮ, ಶ್ರದ್ಧಾ ಭಕ್ತಿಯಿಂದ ನಡೆದ ಶ್ರಾವಣ ಮಾಸದ ಪೂಜೆ

12/08/2024, 07:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಶ್ರಾವಣ ಮಾಸದ ಮೊದಲನೇ ಶನಿವಾರದ ಅಂಗವಾಗಿ ಶ್ರೀ ಶನೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಮೈಸೂರು ಮಾನಂದವಾಡಿ ಹೆದ್ದಾರಿಯ ಕಂಚಮಳ್ಳಿ ಗೇಟ್ ಬಳಿ ಶ್ರೀ ಶನೇಶ್ವರ ಸ್ವಾಮಿ ಪುಣ್ಯಕ್ಷೇತ್ರವಿದೆ. ಶ್ರಾವಣ ಮಾಸದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯದ ಆವರಣದಲ್ಲಿ ಶ್ರೀ ಶನೇಶ್ವರ ಸ್ವಾಮಿ ಸೇರಿದಂತೆ ದೇವಾನುದೇವತೆಗಳ ಹಾಗೂ ಶಿವಶರಣರ ಪುತ್ಥಳಿಗಳು ರಾರಾಜಿಸಿ ದೇವಾಲಯಕ್ಕೆ ಕಳೆ ತಂದಿದ್ದವು. ಸಂಜೆ 4:00 ಗಂಟೆ ವೇಳೆಗೆ ಕಪಿಲಾ ನದಿ ತೀರದಿಂದ ಹಾಲರವಿ ಉತ್ಸವ ದೊಂದಿಗೆ ಮಂಗಳವಾದ್ಯ, ವೀರಗಾಸೆ ಕುಣಿತ, ತಮಟೆ ಹಾಗೂ ನಗಾರಿ ವಾದ್ಯಗಳೊಂದಿಗೆ ಶ್ರೀ ಶನೇಶ್ವರ ಸ್ವಾಮಿಯವರ ಉತ್ಸವ ಮೂರ್ತಿ ಹಾಗೂ ಪುತ್ತಳಿಯನ್ನು ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು ನಂತರ ಸ್ವಾಮಿಗೆ ಮಹಾಮಂಗಳಾರತಿ ನಡೆಯಿತು
ಇದೇ ಸಂದರ್ಭ ಶ್ರೀ ಕ್ಷೇತ್ರದ ನೂತನ ದೇವಾಲಯದ ಕಳಸ ಪ್ರತಿಷ್ಠಾಪನೆಯನ್ನು ಹಾಗೂ ಶ್ರೀ ಕ್ಷೇತ್ರದಲ್ಲಿ ಶ್ರೀ ಶನೇಶ್ವರ ಸ್ವಾಮಿಯವರ 56 ಅಡಿ ಎತ್ತರದ ಬೃಹತ್ ಪುತ್ತಳಿ ಸ್ಥಾಪನೆಗೆ ಶಾಸಕ ಅನಿಲ್ ಚಿಕ್ಕಮಾದು ಗುದ್ದಲಿ ಪೂಜೆ ನೆರವೇರಿಸಿದರು.
ಮೈಸೂರು, ನಂಜನಗೂಡು, ಎಚ್ ಡಿ ಕೋಟೆ, ಗುಂಡ್ಲುಪೇಟೆ ಸೇರಿದಂತೆ ವಿವಿಧ ತಾಲೂಕುಗಳಿಂದ ಸಾವಿರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಭಕ್ತಿ ಭಾವ ಮೆರೆದರು.
ಬಂದ ಎಲ್ಲಾ ಭಕ್ತರಿಗೆ ಮೈಸೂರಿನ ಶಿವಣ್ಣ ಹಾಗೂ ಕುಟುಂಬದವರಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಹಾಗೂ ದಾನಿ ಶಿವಣ್ಣ ಕುಟುಂಬದವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದೇವಾಲಯದ ಗುಡ್ಡಪ್ಪ ಕುಮಾರಸ್ವಾಮಿ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು