10:29 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಸಡಗರ ಸಂಭ್ರಮದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ; ಬೃಹತ್ ಮೆರವಣಿಗೆ

16/08/2024, 00:20

ಮಂಗಳೂರು(reporterkarnataka.com): ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನಂಜನಗೂಡು ತಾಲ್ಲೂಕು ವತಿಯಿಂದ ನಂಜನಗೂಡು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ಸಡಗರ- ಸಂಭ್ರಮದಿಂದ ಆಚರಿಸಲಾಯಿತು.
ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಧ್ವಜಾರೋಹಣ ನೆರವೇರಿಸಿ ಶುಭ ಸಂದೇಶ ತಿಳಿಸಿದರು
ನಂಜನಗೂಡಿನ ವಿವಿಧ ಶಾಲಾ ಮಕ್ಕಳು ಮತ್ತು ಪೊಲೀಸ್ ಇಲಾಖೆಯಿಂದ ಆಕರ್ಷಕ ಪಥ ಸಂಚಲನೆ ನಡೆಸಿ ಅತಿಥಿ ಗಣ್ಯರಿಗೆ ಗೌರವ ವಂದನೆ ಸಲ್ಲಿಸಿದರು.
ಗಾಂಧೀಜಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವೇದಿಕೆ ಕಾರ್ಯಕ್ರಮವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಕ್ಕೂ ನಂಜನಗೂಡಿಗೂ ಸಂಬಂಧ ಇದೆ. ಸ್ವಾತಂತ್ರ್ಯ ಹೋರಾಟಗಾರರಾದ ತಗಡೂರು ರಾಮಚಂದ್ರರಾವ್ ರವರು ಇದೇ ನೆಲದಲ್ಲಿ ಜನಿಸಿದ್ದರು. ನಂಜನಗೂಡು ತಾಲ್ಲೂಕಿನ ಬದನವಾಳು ಮತ್ತು ತಗಡೂರು ಗ್ರಾಮಕ್ಕೆ ಗಾಂಧೀಜಿಯವರು ಭೇಟಿ ನೀಡಿದ್ದರು. ಗಾಂಧೀಜಿಯವರು ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿರುವ ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಮಗ್ರ ಅಭಿವೃದ್ಧಿ ಮಾಡುತ್ತೇವೆ. ಗಾಂಧೀಜಿ ಕಾಲಿಟ್ಟ ನೆಲವನ್ನು ಅಭಿವೃದ್ಧಿಪಡಿಸಿ ಇಡೀ ವಿಶ್ವಕ್ಕೆ ಸಾರುವ ಕೆಲಸ ಮಾಡಬೇಕಿದೆ. ಭಾರತ ದೇಶ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಾ ಬಂದಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಅತ್ಯಾಚಾರ ನಡೆಯುತ್ತಲೇ ಇವೆ. ಕಲ್ಕತ್ತದಲ್ಲಿ ಹೆಣ್ಣು ಮಗಳ ಹತ್ಯೆ ನಡೆದಿದೆ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಇಂತಹ ಕೃತ್ಯ, ಹತ್ಯಗಳು ಇನ್ನು ಮುಂದೆ ನಡೆಯಬಾರದು. ಮಹಿಳೆಯರ ಪರವಾಗಿ ನಾನು ನಿಲ್ಲುತ್ತೇನೆ ಎಂದು ಹೇಳಿದರು.
ಇದೇ ಸಂದರ್ಭ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಯಿತು.


ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ತಾಲ್ಲೂಕು ಕ್ರೀಡಾಂಗಣದಿಂದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ವರೆಗೆ ಬೃಹತ್ ಮೆರವಣಿಗೆ ಜಾಥಾಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಕೆ.ಎಸ್.ಒ.ಯು ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಡಾ.ಶೈಲೇಶ್ ರಾಜ್ ಅರಸ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಡಿವೈಎಸ್ಪಿ ರಘು, ನಗರ ಸಭಾ ಕಮಿಷನರ್ ನಂಜುಂಡಸ್ವಾಮಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಶಾಲಾ ಮಕ್ಕಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು