ಇತ್ತೀಚಿನ ಸುದ್ದಿ
ನಂಜನಗೂಡು: ಸರಕಾರಿ ಶಾಲೆಯಲ್ಲಿ ದಾಖಲಾತಿ ಆಂದೋಲನ ಜಾಥಾ
03/06/2024, 20:40

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ಇವರ ಸಹಯೋಗದೊಂದಿಗೆ ನಂಜನಗೂಡು ಮತ್ತು ಎಚ್ ಡಿ ಕೋಟೆ ಗಡಿಯಂಚಿನ ಚಿಕ್ಕನಂದಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿಗೆ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ವಿವಿಧ ನಾಮಪ ಫಲಕಗಳನ್ನು ಹಿಡಿದು ಸೇರಿಸಿ ,ಸೇರಿಸಿ ಮಕ್ಕಳನ್ನು ಶಾಲೆಗೆ ಸೇರಿಸಿ ಎಂಬ ಘೋಷಣೆಗಳನ್ನು ಕೂಗುತ್ತಾ ಬ್ಯಾಂಡ್ ವಾದನದೊಂದಿಗೆ ಗ್ರಾಮದ ಬೀದಿ ಬೀದಿಗಳಿಗೆ ತೆರಳಿ ಸಾರ್ವಜನಿಕರು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸಿದರು. ಬಳಿಕ ಸಹಶಿಕ್ಷಕ ಮಹದೇವಸ್ವಾಮಿ ಮಾತನಾಡಿ 2024 – 25ನೇ ಸಾಲಿಗೆ ಶಾಲೆ ಪ್ರಾರಂಭವಾಗಿದ್ದು ಇಂದು ಮತ್ತು ನಾಳೆ ಎರಡು ದಿನ ಶಾಲೆಗೆ ಸೇರದ ಹಾಗೂ ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಶಾಲಾ ದಾಖಲಾತಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದರು.