4:16 AM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು