12:31 AM Tuesday14 - January 2025
ಬ್ರೇಕಿಂಗ್ ನ್ಯೂಸ್
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ… ಹಸುಗಳ ಕೆಚ್ಚಲು ಕೊಯ್ದು ಆರೋಪಿಗಳ ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು: ಸಿಎಂ ಸಿದ್ದರಾಮಯ್ಯ ನೈಸ್ ಯೋಜನೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಎಲ್ಲಿ?: ರಾಜ್ಯ ಸರ್ಕಾರದ ವಿರುದ್ಧ…

ಇತ್ತೀಚಿನ ಸುದ್ದಿ

ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ

14/01/2025, 19:35

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಭೋವಿ ಜನಾಂಗದ ಮುಖಂಡರು ಶ್ರೀ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮೂಡಗೂರು ಮಠದ ಶ್ರೀ ಇಮ್ಮಡಿ ಉದ್ದಾನ ಸ್ವಾಮಿಗಳು ಆಶೀರ್ವಚನ ನೀಡಿ ಶ್ರೀ ಸಿದ್ದರಾಮೇಶ್ವರ ಜೀವನ ಚರಿತ್ರೆ ಹಾಗೂ ಅವರ ವಿಚಾರಧಾರೆಗಳನ್ನು ತಿಳಿಸುತ್ತಾ ಶ್ರೀ ಸಿದ್ದರಾಮೇಶ್ವರರು ಉತ್ತಮ ವಚನಕಾರರು ಹಾಗೂ ಶಿವಶರಣರು ಆಗಿದ್ದರು. ಅವರ ತತ್ವ ಆದರ್ಶಗಳನ್ನು ಇಂದಿನ ಪೀಳಿಗೆ ಗೆ ತಿಳಿಸುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿ ಮಾಡುವಂತೆ ತಿಳಿಸಿದರು.


ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಶ್ರೀ ಸಿದ್ದರಾಮೇಶ್ವರ ಜಯಂತಿ ಶುಭಾಶಯ ಕೋರಿದರು.
ಇದೇ ಸಂದರ್ಭ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಭೋವಿ ಸಮಾಜದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಸಮಾಜದ ಮುಖಂಡರಾದ ಲಿಂಗರಾಜು, ಪಾಪಣ್ಣ, ಮಹಾದೇವ್, ವಸಂತ, ಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು