2:40 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವಾಲಯ: ನ. 17ರಂದು ಚಿಕ್ಕಜಾತ್ರಾ ಮಹೋತ್ಸವ, 19ರಂದು ತೆಪ್ಪೋತ್ಸವ

15/11/2024, 21:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಇದೇ ನವೆಂಬರ್ 17ರಂದು ಚಿಕ್ಕಜಾತ್ರಾ ಮಹೋತ್ಸವ ನಡೆಯಲಿದೆ .


ಜಾತ್ರೆ ಪ್ರಯುಕ್ತ ನವೆಂಬರ್ 14ರಂದು ಶ್ರೀಕಂಠಮುಡಿ ಉತ್ಸವ 17ರಂದು ಬೆಳಿಗ್ಗೆ 10. 45ರಿಂದ 11:30 ಗಂಟೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಕ್ಷೇತ್ರಾಧಿಪತಿ ಶ್ರೀ ನಂಜುಂಡೇಶ್ವರರ ರಥಾರೋಹಣ ಹಾಗೂ 19 ರಂದು ರಾತ್ರಿ 7.00 ಗಂಟೆಗೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವವು ಸೇರಿದಂತೆ ಎಲ್ಲಾ ಧಾರ್ಮಿಕ ಕಾರ್ಯಗಳು ದೇವಾಲಯದ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ನಡೆಯಲಿದೆ. ಚಿಕ್ಕ ಜಾತ್ರೆಯ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತ ಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಕೃಪೆಗೆ ಪಾತ್ರರಾಗಬೇಕಾಗಿ ನಂಜನಗೂಡು
ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಎಂ,ಆಡಳಿತಾಧಿಕಾರಿ ಹಾಗೂ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು ಹಾಗೂ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ. ವಿನಂತಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು