7:35 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನೆರವೇರಿದ ಶಿವ ದೀಪೋತ್ಸವ: ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗೆ ಪೂಜೆ

27/11/2023, 20:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನವೆಂಬರ್ 28ರಂದು ನಡೆಯಲಿರುವ ಚಿಕ್ಕಜಾತ್ರ ಮಹೋತ್ಸವದ ಅಂಗವಾಗಿ 6ನೇ ದಿನವಾದ ಭಾನುವಾರ ಸಂಜೆ ಕಾರ್ತಿಕ ಮಾಸ ಹಾಗೂ ಹುಣ್ಣಿಮೆ ದಿನದಂದು ಶ್ರೀ ಶಿವ ದೀಪೋತ್ಸವವನ್ನು ಹಲವಾರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಶಿವ ದೀಪೋತ್ಸವಕ್ಕಾಗಿ ದೇವಾಲಯದ ಮುಂದೆ ಸುಮಾರು 20 ಅಡಿಗೂ ಉದ್ದದ ದೀಪ ಸ್ತಂಭವನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಸಲ್ಲಿಸಲಾಯಿತು.


ಅಲಂಕೃತಗೊಂಡ ಶ್ರೀ ನಂಜುಂಡೇಶ್ವರ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಗಳನ್ನು ದೇವಾಲಯದಿಂದ ಹೊರ ತಂದು ಪ್ರಾಂಗಣದಲ್ಲಿರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ದೇವಾಲಯದ ಸುತ್ತ ಮೆರವಣಿಗೆಯಲ್ಲಿ ಬಂದ ಉತ್ಸವ ಮೂರ್ತಿಗಳನ್ನು ದೀಪ ಸ್ತಂಭದ ಮುಂಭಾಗದ ಶಿವ ಮಂಟಪದಲ್ಲಿ ಕೂರಿಸಲಾಯಿತು. ಬಳಿಕ ದೀಪಸ್ತಂಭದಲ್ಲಿ ಅಳವಡಿಸಲಾಗಿದ್ದ ದೀಪ ಹಾಗೂ ಎಣ್ಣೆ ಹಚ್ಚಿದ್ದ ನೂರಾರು ಪೆಂಜುಗಳನ್ನು ಹೊತ್ತಿ ಉರಿಸುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು.
ಶಿವ ದೀಪೋತ್ಸವದಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರು ದೀಪೋತ್ಸವವನ್ನು ಕಣ್ತುಂಬಿ ಕೊಂಡು ತಮ್ಮ ಭಕ್ತಿ ಭಾವ ಮೆರೆದರು. ಅಲ್ಲದೆ ಹಲವಾರು ಭಕ್ತರು ದೇವಾಲಯದ ಮುಂಭಾಗ ವಿವಿಧ ಬಗೆಯ ದೀಪಾರತಿಗಳನ್ನು ಬೆಳಗುವ ಮೂಲಕ ಭಕ್ತಿಯ ಪರಾಕಾಷ್ಠೆ ಯಲ್ಲಿ ಮಿಂದೆದ್ದರು.
ಚಿಕ್ಕ ಜಾತ್ರೆ ಪ್ರಯುಕ್ತ ದೇವಾಲಯವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಸೇರಿದಂತೆ ಅರ್ಚಕ ವೃಂದ ಹಾಗೂ ದೇವಾಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದೇವಾಲಯದ ಅರ್ಚಕರು ಪಾರುಪತ್ತೆಗಾರರು ಆದ Krwa ಶಿವಶಂಕರ ದೀಕ್ಷಿತ್ ಮಾತನಾಡಿ, ಶಿವ ದೀಪೋತ್ಸವದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು