2:58 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ನಂಜನಗೂಡು: ಶ್ರೀ ಚಿಕ್ಕದೇವಮ್ಮ ದೇವಾಲಯ ಉದ್ಘಾಟನೆ; ಕಂಸಾಳೆ ಕುಣಿತ, ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ

01/02/2024, 22:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಲೋಕಾರ್ಪಣೆಗೊಳಿಸಲಾಯಿತು.
ಗ್ರಾಮದ ಭಕ್ತರೊಬ್ಬರು ನಿರ್ಮಿಸಿರುವ ನೂತನ ದೇವಾಲಯವನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಹರತಲೆ ಚಿಕ್ಕರಂಗನಾಯಕ ಉದ್ಘಾಟಿಸಿದರು. ಇದೇ ಸಂದರ್ಭ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಕಬಿನಿ ನಾಲೆಯಿಂದ ಹಾಲರವಿ ಉತ್ಸವ ತರಲಾಯಿತು.


ತಮಟೆ ವಾದ್ಯ, ಮಂಗಳವಾದ್ಯ, ಕಂಸಾಳೆ ಕುಣಿತಗಳೊಂದಿಗೆ ಕಳಶಹೊತ್ತ ಗ್ರಾಮದ ಹೆಣ್ಣು ಮಕ್ಕಳ ಹಾಲರವಿ ಉತ್ಸವ ಹಾಗೂ ಶ್ರೀ ಚಿಕ್ಕದೇವಮ್ಮನವರ ಉತ್ಸವ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಉದ್ದಕ್ಕೂ ಮಹಿಳೆಯರು ಸೇರಿದಂತೆ ನೂರಾರು ಭಕ್ತರು ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ಭಾವ ಮೆರೆದರು. ಇದೇ ಸಂದರ್ಭ ದೇವಾಲಯವನ್ನು ಉದ್ಘಾಟಿಸಿದ ಚಿಕ್ಕ ರಂಗನಾಯಕ ಅವರನ್ನು ದೇವಾಲಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ದೇವಾಲಯಕ್ಕೆ ಬಂದ ಎಲ್ಲ ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬಳಿಕ ಚಿಕ್ಕರಂಗನಾಯಕ ಮಾತನಾಡಿ ಶಕ್ತಿ ದೇವತೆ ಶ್ರೀ ಚಿಕ್ಕದೇವಮ್ಮನವರ ನೂತನ ದೇವಾಲಯವನ್ನು ಸಂತೋಷದಿಂದ ಉದ್ಘಾಟಿಸಿದ್ದೇನೆ. ತಾಯಿಯು ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು