2:22 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ

20/02/2024, 19:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣೇಶ್ ಹಾಗೂ ಶಿಕ್ಷಣ ಸಂಯೋಜಕ ರಮೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಶಿಕ್ಷಣ ಸಂಯೋಜಕರಾದ ರಮೇಶ್ ಮಾತನಾಡಿ, ಬುದ್ಧಿವಂತಿಕೆಯಿಂದ ಏನು ಪ್ರಯೋಜನವಿಲ್ಲ. ಶಿಕ್ಷಕರ ಬದ್ಧತೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಉಳಿದ ಕೆಲವೇ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ತಮ್ಮ ಬುದ್ಧಿವಂತಿಕೆ ಹಾಗೂ ಆಟೊಗಳನ್ನು ಬದಿಗಿಟ್ಟು ಪರಿಶ್ರಮದ ಕಡೆಗೆ ಗಮನ ಕೊಡಿ ಎಂದು ಕಿವಿಮಾತು ಹೇಳಿದರು.


ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕುಮಾರ್ ಮಾತನಾಡಿ, ಕೆಲವರ ಪರಿಶ್ರಮದಿಂದಾಗೀ 34 ವರ್ಷಗಳಿಂದ ಈ ಶಾಲೆ ಉತ್ತಮವಾಗಿ ಬೆಳೆದು ಬಂದಿದೆ. ಅದರಲ್ಲೂ ಒಂದು ಶಾಲೆ ಬೆಳೆಯಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯು ಶೇ. 98 ಫಲಿತಾಂಶ ಪಡೆದಿತ್ತು. ಈ ಸಾಲಿನಲ್ಲಿ ನಮ್ಮ ಶಿಕ್ಷಕರ ಪರಿಶ್ರಮದ ಜೊತೆಗೆ ಶಿಕ್ಷಣ ಸಂಯೋಜಕರು ಮತ್ತು ವಿಷಯವಾರು ತಜ್ಞರ ಸಲಹೆ ಯೊಂದಿಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ತಂದೇ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರಕವಾಗಿ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಕರೆಸಿ ಅವರಿಂದ ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಧೈರ್ಯ ತುಂಬುವಂತಹ ಕೆಲಸ ಮಾಡಲಾಯಿತು ಹಾಗೂ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ವಿದ್ಯಾರ್ಥಿಗಳು ನಡೆಸಿಕೊಟ್ಟ ಫ್ಯಾಷನ್ ಶೋ ಮತ್ತು ನೃತ್ಯ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಫ್ಯಾಶನ್ ಶೋನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಬಹುಮಾನ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು