ಇತ್ತೀಚಿನ ಸುದ್ದಿ
ನಂಜನಗೂಡು: 1 ಕೋಟಿ ವೆಚ್ಚದಲ್ಲಿ ಒಣ ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣಾ ಘಟಕಕ್ಕೆ ಶಾಸಕರಿಂದ ಗುದ್ದಲಿ ಪೂಜೆ
09/09/2024, 15:58
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ನಗರ ಸಭಾವತಿಯಿಂದ ಚಾಮರಾಜನಗರ ರಸ್ತೆಯ ಮಹದೇವ ನಗರ ಬಳಿ ಇರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸುಮಾರು 1 ಕೋಟಿ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಪೋಸ್ಟ್ ಘಟಕ ಹಾಗೂ ನೆಲ ಬರ್ತಿಯ ಜಾಗದಲ್ಲಿ ಒಣ ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣೆ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ನೂತನ ನಗರಸಭೆ ಅಧ್ಯಕ್ಷ ಶ್ರೀಕಂಠ ಸ್ವಾಮಿ ಸೇರಿದಂತೆ ಅಧಿಕಾರಿಗಳು ಹಾಗೂ ಗಣ್ಯರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ನಗರಸಭಾ ಆಯುಕ್ತ ನಂಜುಂಡಸ್ವಾಮಿ ಮಾತನಾಡಿ, ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ನಗರಸಭಾ ಸದಸ್ಯರುಗಳು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.